ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರು ಪ್ರಶಾಂತ್ ನಾಗಲಾಪುರ್ ಮಾತನಾಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಮೋಟಾರ್ ವಾಹನ ನಿರೀಕ್ಷಕ ಪ್ರದೀಪ್ ಹಡಗಲಿ, ಸಂಚಾರಿ ಪೊಲೀಸ್ ಠಾಣೆ ಸಿಪಿಐ ಡಿ.ಹುಲುಗಪ್ಪ, ಡಿಡಿಪಿಯು ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್, ಬಿಇಓ ಶೇಖರಪ್ಪ ಹೊರಪೇಟೆ ಇತರರಿದ್ದರು.
- ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಸೂಚನೆ
ಹೊಸಪೇಟೆ: ಶಾಲಾ ವಾಹನಗಳಲ್ಲಿ ಮಕ್ಕಳ ಭದ್ರತೆ ಚಾಲಕರ ಕೈಯಲ್ಲಿದ್ದು, ಸುರಕ್ಷಿತವಾಗಿ ಶಾಲೆಗೆ ಹಾಗೂ ಮನೆಗೆ ತಲುಪಿಸುವ ಜವಾಬ್ದಾರಿ ಇದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಮಣ್ಯ ಹೇಳಿದರು.
37ನೇ ರಸ್ತೆ ಸುರಕ್ಷತಾ ಸಪ್ತಾಹದ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬರು ವಾಹನ ಚಾಲಕ ಅಜಾಗರೂಕತೆಯಿಂದ ರಸ್ತೆ ಅಪಘಾತ ಸಂಭವಿಸುತ್ತಿವೆ. ಇದರಿಂದ ಹಲವು ಅಮಯಾಕ ಜೀವಗಳು ಸಾವು ನೋವು ಅನುಭವಿಸುವಂತಾಗಿದೆ. ಅದಷ್ಟೇ ಅಲ್ಲದೇ ಅಂಗವಿಕಲರಾಗುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳನ್ನು ಬೀದಿಗೆ ಬರುತ್ತಿವೆ ಈ ನಿಟ್ಟಿನಲ್ಲಿ ವಾಹನ ಚಾಲನೆ ಮಾಡುವಾಗ ಯಾವುದೇ ಕಾರಣಕ್ಕೂ ಧೂಮಪಾನ, ಮದ್ಯಪಾನ ಮಾಡಬಾರದು. ಚಾಲನೆ ಮಾಡುವಾಗ ಏಕಾಗ್ರತೆ ಹೊಂದಿರಬೇಕು. ರಸ್ತೆ ನಿಯಮಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ವೇಗದ ಮಿತಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೋಷಕರು ತಮ್ಮ ಜೀವನದ ಸಂಪಾದನೆಯನ್ನು ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸಿರುತ್ತಾರೆ. ಅಪಘಾತದಲ್ಲಿ ಮಗು ಮೃತಪಟ್ಟರೆ ಇಡೀ ಕುಟುಂಬವೇ ನಾಶವಾಗುತ್ತದೆ ಎಂಬ ಭಾವನಾತ್ಮಕವಾಗಿ ತಿಳಿ ಹೇಳಿದರು.