ಕೂಡ್ಲಿಗಿಯಲ್ಲಿ ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು.
ಕೂಡ್ಲಿಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರೇ ಸಂವಿಧಾನ ರಚಿಸಿದರು ಎಂಬ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಶಾಸಕ ಎನ್.ಟಿ.ಡಾ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಂದಿರುವ ನಾನು ಕನ್ನಡ ಮಾಧ್ಯಮದಲ್ಲಿ ಓದಿ, ಡಾಕ್ಟರ್, ಇದೀಗ ಶಾಸಕನಾಗಲು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಸಂವಿಧಾನಿಕ, ಕಾನೂನಾತ್ಮಕವಾಗಿ ನಾವೆಲ್ಲ ಒಗ್ಗೂಡಿ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಾಗಿದೆ. ಉತ್ತಮ ಸ್ಥಾನಮಾನ ಪಡೆಯಲು ಸಂವಿಧಾನ ಅವಕಾಶ ಕಲ್ಪಿಸಿದೆ ಎಂದರು.
ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಆಗಿದೆ. ಸಂವಿಧಾನ ಜಾರಿಯಾದ ಬಳಿಕ ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಯಿತು. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಬೇಕು. ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರನ್ನು ನಾವು ಸದಾ ನೆನೆಯಬೇಕು ಎಂದು ಹೇಳಿದರು.
ಬಿಇಒ ಮೈಲೇಶ್ ಬೇವೂರು, ತಹಸೀಲ್ದಾರ್ ವಿ.ಕೆ. ನೇತ್ರಾವತಿ, ದಲಿತ ಮುಖಂಡ ಬಂಡೆ ರಾಘವೇಂದ್ರ, ಪಪಂ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ತಾಪಂ ಇಒ ನರಸಪ್ಪ, ಮುಖಂಡರಾದ ಎಸ್. ದುರುಗೇಶ್, ಡಿ.ಎಚ್.ದುರುಗೇಶ, ಸಾಸಲವಾಡ ಶಿವಣ್ಣ, ಎಚ್.ಪರಶುರಾಮ, ಶಿವರಾಜ್, ಅಜ್ಜಯ್ಯ, ಟಿ.ನಾಗರಾಜ, ಮಹೇಶ, ಕೆ. ಮೂಗಪ್ಪ, ಕರವೇ ತಾಲೂಕು ಅಧ್ಯಕ್ಷ ಕಾಟೇರ್ ಹಾಲೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಕೆ.ಜಿ.ಅಂಜನೇಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿಲಾನ್, ಮಾಜಿ ಸೈನಿಕ ಕಾಟೇರ್ ರಮೇಶ್ ಇತರರಿದ್ದರು.
ಇದಕ್ಕೂ ಮೊದಲು ಪಟ್ಟಣದ ಬಸವೇಶ್ವರ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಜಾಥಾಭ ನಡೆಯಿತು. ನಂತರ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಪುಸ್ತಕ, ಪೀಠಿಕೆಗೆ ಪೂಜೆ ಸಲ್ಲಿಸಲಾಯಿತು.