ಒನಕೆ ಓಬವ್ವ ಉತ್ಸವದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮೀಡಿಯಾ ಕೇಂದ್ರ ಉದ್ಘಾಟಿಸಿದರು.
ಗುಡೇಕೋಟೆ: ಹಂಪಿ ಉತ್ಸವ ಮಾದರಿಯಲ್ಲಿ ಗುಡೇಕೋಟೆಯಲ್ಲಿ ಒನಕೆ ಓಬವ್ವ ಉತ್ಸವ ಆಯೋಜನೆ ಆಗಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಗುಡೇಕೋಟೆಯಲ್ಲಿ ಒನಕೆ ಓಬವ್ವ ಉತ್ಸವದ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಸರ್ಕಾರ ಒನಕೆ ಓಬವ್ವ ಉತ್ಸವಕ್ಕೆ ಅನುದಾನ ನೀಡುತ್ತಿದೆ. ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅನ್ಯ ಜಿಲ್ಲೆಗಳ ಕಲಾವಿದರಿಗೂ ಅವಕಾಶ ನೀಡಲಾಗಿದೆ. ಉತ್ಸವದ ಕುರಿತು ರಾಜ್ಯಮಟ್ಟದಲ್ಲೂ ಸುದ್ದಿ ಪ್ರಸಾರ ಮಾಡಿರುವ ಮಾಧ್ಯಮಗಳ ಕಾರ್ಯ ಶ್ಲಾಘನೀಯವಾಗಿದೆ. ಹಿಂದುಳಿದ ತಾಲೂಕಿನ ಹೋಬಳಿ ಕೇಂದ್ರದಲ್ಲಿ ವಿಜೃಂಭಣೆಯಿಂದ ಉತ್ಸವ ಆಯೋಜಿಸಲು ಕಾಂಗ್ರೆಸ್ ಸರ್ಕಾರ ಕಾರಣವಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಹಂಪಿ ಉತ್ಸವಕ್ಕೆ ಈ ಸಲ ಕಲಾವಿದರಿಂದ ನಾಲ್ಕು ಸಾವಿರ ಅರ್ಜಿಗಳು ಬಂದಿದ್ದು, ಆದ್ಯತೆ ಮೇರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.