ಗುಡೇಕೋಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಕಾರ್ಗಿಲ್ ವಿಜಯ ದಿನ ಆಚರಿಸಲಾಯಿತು.  
ವಿಜಯನಗರ

ನಮನ ಸಲ್ಲಿಕೆ ನಮ್ಮ ಆದ್ಯ ಕರ್ತವ್ಯ

ಕಾನಹೊಸಹಳ್ಳಿ: ದೇಶದ ಪ್ರತಿಯೊಬ್ಬ ಪ್ರಜೆ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಯುವಕರು ದೇಶ ಸೇವೆ ಸಲ್ಲಿಸುವ ಮೂಲಕ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಗೀರೇಶ್ ತಿಳಿಸಿದರು.

ಗುಡೇಕೋಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿನಾಚರಣೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಸೇವೆಯಂತಹ ಪುಣ್ಯ ಕಾರ್ಯ ಮತ್ತೊಂದಿಲ್ಲ. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಲು ಶ್ರಮಿಸಿದ ನಮ್ಮ ಯೋಧರ ಪರಾಕ್ರಮ ಮೆಚ್ಚುವಂತಹದ್ದು, ವೀರಮರಣ ಹೊಂದಿದ ಯೋಧರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಮಾಜಿ ಸೈನಿಕರಾದ ಸೂರನಾಯಕ ನೇತ್ರನಹಳ್ಳಿ, ಆನಂದನಾಯ್ಕ, ವೆಂಕಟೇಶ್ ಹಾಲಸಾಗರ, ವಲಿ ಗುಡೇಕೋಟೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ರುಕ್ಮಿಣಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ವೆಂಕಟೇಶ್, ಎಸ್ಡಿಎಂಸಿ ಉಪಾಧ್ಯಕ್ಷ ಮಂಜುನಾಥ್, ರಾಜಣ್ಣಗೌಡ, ಶಿವಪ್ರಸಾದ್ ಗೌಡ, ಸ್ಕೌಟ್-ಗೈಡ್ಸ್ ಕಾರ್ಯದರ್ಶಿ ತಿಂದಪ್ಪ, ಶಿವಪುತ್ರಗೌಡ, ಶಾಂತಕುಮಾರಿ ಇತರರಿದ್ದರು.