ಹೊಸಪೇಟೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಉದ್ಘಾಟಿಸಿದರು. ಡಿಎಚ್‌ಒ ಮಂಜುನಾಥ, ನೇತ್ರಲಕ್ಷ್ಮಿ ಆಸ್ಪತ್ರೆಯ ಡಾ.ಶ್ರೀನಿವಾಸ ವಿ.ದೇಶಪಾಂಡೆ, ಮೋಟಾರು ವಾಹನ ನಿರೀಕ್ಷಕ ನಾಗರಾಜ್ ಇತರರಿದ್ದರು.
- ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಅಭಿಪ್ರಾಯ
ಹೊಸಪೇಟೆ: ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆಯಿಂದ ರಸ್ತೆ ಅಪಘಾತ ತಪ್ಪಿಸುವ ಮೊದಲ ಹಾದಿಯಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್ ಹೇಳಿದರು.
37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಇಲ್ಲಿನ ನೇತ್ರಲಲಕ್ಷಿö್ಮÃ ವೈದ್ಯಾಲಯ, ಅಶ್ವಿನಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಚಾಲಕರು ವಾಹನ ಚಾಲನೆ ಮಾಡಬೇಕಾದರೆ ಸಂಚಾರ ನಿಯಮ ಪಾಲನೆ ಮಾಡಬೇಕು. ಮದ್ಯಪಾನ, ಧೂಮಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಾಯಕ್ಕೆ ಎಡೆ ಮಾಡಿಕೊಡಲಿದೆ. ರಸ್ತೆ ಸಂಚಾರ ನಿಯಮಗಳನ್ನರಿತು ಮುಂಜಾಗ್ರತೆ ವಾಹನ ಚಾಲನೆ ಮಾಡಬೇಕು. ನಿಗದಿತ ವೇಗ ಮಿತಿಯಲ್ಲಿ ಸುರಕ್ಷಿತವಾಗಿ ಚಾಲನೆ ಮಾಡಬೇಕು. ಸುಗಮ ಸಂಚಾರಕ್ಕೆ ಕಣ್ಣಿನ ಆರೋಗ್ಯ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.
ಉದ್ಯಾಮಿ ಮಧುಸೂದನ್ ಮಾತನಾಡಿ, 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಉಚಿತ ತಪಾಸಣೆ ಶಿಬಿರ ಆಯೋಜಿಸಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದರು.