ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್ ಇದ್ದರು. 
ವಿಜಯನಗರ

ಹಕ್ಕುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಮಾನವ ಹಕ್ಕು ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕರೆ
ಹೊಸಪೇಟೆ: ಮಾನವ ಹಕ್ಕುಗಳಿಂದ ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ಧಿ ಮತ್ತು ಮಾನವನ ಅಸ್ತಿತ್ವ ಸಾಧ್ಯವಾಗಿದೆ. ಇವುಗಳ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು.
ಮಾನವ ಹಕ್ಕುಗಳ ದಿನಾಚರಣೆ ಪ್ರತಿ ವರ್ಷ ಡಿ.10 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಇದು 1948 ರಲ್ಲಿ ವಿಶ್ವಸಂಸ್ಥೆಯು ಅಂಗೀಕರಿಸಿದ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಸ್ಮರಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ, ಸಮಾನತೆ ಮತ್ತು ಸ್ವಾತಂತ್ರ‍್ಯ ಖಾತ್ರಿಪಡಿಸುವ ಈ ಹೆಗ್ಗುರುತು ದಾಖಲೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಯಾವುದೇ ಜಾತಿ ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ, ಸ್ಥಾನಮಾನಗಳಿಗೆ ಬೆಲೆ ಕೊಡದೇ ಎಲ್ಲರೂ ಕೂಡ ಸರಿಸಮಾನರು. ಪ್ರತಿಯೊಬ್ಬರು ಬದುಕುವ ಹಕ್ಕಿನೊಂದಿಗೆ ಇತರೆ ಹಕ್ಕನ್ನು ಹೊಂದಿದ್ದಾರೆ. ಸಮಾಜದಲ್ಲಿ ಮಾನವನಿಗೆ ಯಾವುದೇ ಸ್ವತಂತ್ಯç ಹಾಗೂ ಹಕ್ಕುಗಳು ಇರದೇ ಹೋಗಿದ್ದರೆ ಮನುಷ್ಯ ಹೇಗೆ ಬೇಕೋ ಹಾಗೆ ಬದುಕುತ್ತಿದ್ದ. ಭವಿಷ್ಯದಲ್ಲಿ ಮಾನವನ ಅಸ್ತಿತ್ವವೇ ಇಲ್ಲವಾಗಿರುತ್ತಿತ್ತು. ಮಾನವ ಹಕ್ಕುಗಳು ನಾಗರಿಕ ಸಮಾಜದಲ್ಲಿ ಸ್ವಾತಂತ್ರ ಎತ್ತಿ ಹಿಡಿಯುತ್ತದೆ ಎಂದರು.
ಹAಪಿ ವಿವಿ ಪ್ರಾಧ್ಯಪಕ ವೆಂಕಟಗಿರಿ ತಳವಾಯಿ ಮಾತನಾಡಿ, ಮಾನವ ಹಕ್ಕುಗಳು ಉಲ್ಲಂಘನೆಯಾದಲ್ಲಿ ಸಂವಿಧಾನಾತ್ಮಕವಾಗಿ ಪರಿಹಾರ ಕಂಡುಕೊಳ್ಳಬಹುದು. ಅಂಬೇಡ್ಕರ್ ಅವರು ದೇಶಕ್ಕೆ ಅತಿ ದೊಡ್ಡ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬರ ಅಭಿವೃದ್ದಿ ಹಾಗೂ ಅಸ್ತಿತ್ವಕ್ಕೆ ಕಾರಣವಾಗಿದ್ದಾರೆ. ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದರು.