ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಡಾ.ಸಂಜಯ್ ಪೋಲಿಯೋ ಲಸಿಕೆ ಹಾಕಿದರು.  
ವಿಜಯನಗರ

ಅಂಗವೈಕಲ್ಯದಿಂದ ರಕ್ಷಣೆ

ಅಶೋಕ್ ಕುಮಾರ್ ಎನ್
ಕೊಟ್ಟೂರು: ಮಗುವಿಗೆ ಹಾಕುವ ಎರಡು ಹನಿ ಲಸಿಕೆ ಭವಿಷ್ಯದಲ್ಲಿ ಅವರನ್ನು ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಡಾ.ಸಂಜಯ್ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳಿಗೆ ಜು.1 ರೊಳಗೆ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೋಮುಕ್ತ ಭಾರತ ಅಭಿಯಾನಕ್ಕೆ ಕೈಜೋಡಿಸುವಂತೆ ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪತ್ರಿ ಬಸಪ್ಪ ಮಾತನಾಡಿ ಬಸ್ ನಿಲ್ದಾಣದಲ್ಲಿ, ಅಂಗನವಾಡಿ ಕೇಂದ್ರ, ದೇವಸ್ಥಾನಗಳ ಬಳಿ ಸೇರಿದಂತೆ ತಾಲೂಕಿನಲ್ಲಿ ಒಟ್ಟು 31 ಬೂತ್‌ಗಳನ್ನು ನಿರ್ಮಿಸಲಾಗಿದ್ದು, ಏಳು ಜನ ಮೇಲ್ವಿಚಾರಕರು ಹಾಗೂ 62 ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಅಂಗನವಾಡಿ ಮೇಲ್ವಿಚಾರಕಿ ಪೂರ್ಣಿಮಾ, ಕಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಪ್ರದೀಪ್, ಮಹೇಶ್, ಕ್ಷಯ ವಿಭಾಗದ ಮೇಲ್ವಿಚಾರಕ ತಾತನಗೌಡ, ಆಸ್ಪತ್ರೆ ಸಿಬ್ಬಂದಿ ಇದ್ದರು.