ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಎಸ್ಸಿಎಸ್ಟಿ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಸಿದರು. ಎಸ್ಪಿ ಎಸ್.ಜಾಹ್ನವಿ ಇದ್ದರು.
- ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ
ಹೊಸಪೇಟೆ: ಜಾತಿ ನಿಂದನೆ, ಹಲ್ಲೆ , ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ಪ್ರಕರಣಗಳಲ್ಲಿನ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಸಂತ್ರಸ್ತರಿಗೆ 26.55 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಾಲಿನ ಕಳೆದ 3 ತಿಂಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ 13 ಪ್ರಕರಣ ದಾಖಲಾಗಿದ್ದು, 7 ಪ್ರಕಾರಣಗಳಿಗೆ ಸಂಬAಧಿಸಿದAತೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಇನ್ನೂ ಉಳಿದವುಗಳು ತನಿಖಾ ಹಂತದಲ್ಲಿ ಬಾಕಿ ಇವೆ. 5 ಪ್ರಕರಣಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2025 ಡಿಸೆಂಬರ್ ನಿಂದ ಮಾರ್ಚ್ 18ರವರೆಗೆ ಬಳ್ಳಾರಿ ಮತ್ತು ವಿಜಯನಗರ ಎರಡೂ ಜಿಲ್ಲೆಗಳಲ್ಲಿ ದಾಖಲಾದ 97 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದೆ. ಯಾವುದೇ ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದರು.
ದೌರ್ಜನ್ಯ ತಡೆ ಕಾಯ್ದೆ ಕುರಿತು ಜಿಲ್ಲಾದ್ಯಂತ ನಿರಂತರವಾಗಿ ಜಾಗೃತಿ ಕಾರ್ಯಗಾರ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದರೂ ಇಂತಹ ಪ್ರಕರಣಗಳು ದಾಖಲಾಗುತ್ತಿವೆ. ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕೆಲವರು ಈ ಕಾಯ್ದೆಯನ್ನು ಬಂಡವಾಳವಾಗಿಸಿಕೊAಡು ದುರ್ಬಳಕೆ ಮಾಡಿಕೊಳ್ಳಬಾರದು. ಅಂತಹ ಪ್ರಕರಣ ಕಂಡು ಬಂದಲ್ಲಿ ಸಂಬAಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಎಸ್ಪಿ ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಎ.ಕಾಳೆ ಇತರರಿದ್ದರು.