ಡಣಾಪುರ ಬಳಿಯ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕಾಂಟೈನರ್ ಚಾಲಕನ ರಕ್ಷಣೆ ಕಾರ್ಯ ನಡೆಯಿತು.
ಹೊಸಪೇಟೆ: ತಾಲೂಕಿನ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಲಾರಿ ಹಾಗೂ ಕಾಂಟೈನರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಂಟೈನರ್ ಚಾಲಕನ ರಕ್ಷಣೆ ಮಾಡಲಾಗಿದೆ.
ಉತ್ತರ ಪ್ರದೇಶ ಮೂಲದ ಸುರೇಶ್ ಮಿಶ್ರಾ ಕ್ಯಾಬಿನ್‌ನಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಚಾಲಕ. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿAದ ಬಂದ ಕಾಂಟೈನರ್ ಕ್ಯಾಂಟರ್ ಜೋರಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಕ್ಯಾಂಟರ್‌ನ ಮುಂಭಾಗ ಸಂಪೂರ್ಣ ಜಖಂಗೊAಡು ಚಾಲಕ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ ಮುಂಭಾಗ ನಜ್ಜುಗುಜ್ಜಾಗಿದ್ದರಿಂದ ಚಾಲಕ ಹೊರಬರಲಾರದೆ ಒದ್ದಾಡುತ್ತಿದ್ದನು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ಸಾರ್ವಜನಿಕರು ಹಾಗೂ ಕ್ರೇನ್ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಮೋದ್ ಸುರೇಶ ವಾಲಿ ಹಾಗೂ ಠಾಣಾಧಿಕಾರಿ ಡಿ.ಯುವರಾಜ ನೇತೃತ್ವದಲ್ಲಿ ಈ ಯಶಸ್ವಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.