ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆದಿ ಶಂಕರಾಚಾರ್ಯ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣ ರಂಗಣ್ಣನವರ ಇತರರಿದ್ದರು. 
ವಿಜಯನಗರ

ಭಾವೈಕ್ಯತೆಗೆ ಶಂಕರಾಚಾರ್ಯರ ಕೊಡುಗೆ ಅನನ್ಯ

ಪ್ರಮುಖ ಮುಖ್ಯಾಂಶಗಳು

  • ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬಣ್ಣನೆ
ಹೊಸಪೇಟೆ: ಜಗತ್ತಿಗೆ ಅದ್ವೈತ ಸಿದ್ಧಾಂತದAತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಬಣ್ಣಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಸಿದ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಂಕರಾಚಾರ್ಯರು ಕೇವಲ 32 ವರ್ಷಗಳ ಅತ್ಯಲ್ಪ ಜೀವಿತಾವಧಿಯಲ್ಲಿ ಇಡೀ ಭಾರತವನ್ನು ಪಾದಯಾತ್ರೆಯ ಮೂಲಕ ಸಂಚರಿಸಿ, ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪವಿತ್ರ ಮಠಗಳ ಸ್ಥಾಪಿಸಿದರು. ಈ ಮೂಲಕ ಅವರು ರಾಷ್ಟ್ರೀಯ ಭಾವೈಕ್ಯತೆ ಮತ್ತು ಅಖಂಡತೆಗೆ ಭದ್ರ ಬುನಾದಿ ಹಾಕಿದರು. ಶಂಕರಾಚಾರ್ಯರು ಪ್ರತಿಪಾದಿಸಿದ ಅಹಂ ಬ್ರಹ್ಮಾಸ್ಮಿ ತತ್ವವು ಮನುಷ್ಯರಲ್ಲಿರುವ ದೈವತ್ವವನ್ನು ಜಾಗೃತಗೊಳಿಸುತ್ತದೆ. ಸಮಾಜದಲ್ಲಿನ ಮೇಲು-ಕೀಳು ಎಂಬ ಭಾವ ತೊರೆದು ಸೌಹಾರ್ದಯುತವಾಗಿ ಬಾಳಬೇಕು ಎಂದರು.
ಯುವ ಪೀಳಿಗೆಯು ಭೌತಿಕ ಸುಖಕ್ಕೆ ಮಾರುಹೋಗದೆ, ಶಂಕರಾಚಾರ್ಯರು ತೋರಿಸಿಕೊಟ್ಟ ಜ್ಞಾನ ಮತ್ತು ವಿವೇಕದ ಹಾದಿಯಲ್ಲಿ ಸಾಗಬೇಕು. ಸಂಸ್ಕಾರಯುತ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಂತಹ ಮಹಾನ್ ಪುರುಷರ ಜಯಂತಿಗಳು ಕೇವಲ ಆಚರಣೆಗಷ್ಟೇ ಸೀಮಿತವಾಗದೆ, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.