ಕೊಟ್ಟೂರಿನ ಡೋಣೂರು ಚಾನುಕೋಟಿ ಮಠದಲ್ಲಿ ಜಿಪಂ, ತಾಪಂ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದೊಂದಿಗೆ ಆಯೋಜಿಸಿದ್ದದ ಮಹಿಳಾ ಸಬಲೀಕರಣ ಹಾಗೂ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಡಿಸಿ ಕವಿತಾ ಎಸ್.ಮನ್ನಿಕೇರಿ ಉದ್ಘಾಟಿಸಿದರು.  
ವಿಜಯನಗರ

ಸ್ತ್ರೀಯರು ಶಿಕ್ಷಣ ಪಡೆದರೆ ಸಾಮಾಜಿಕ ಬದಲಾವಣೆ

ಕೊಟ್ಟೂರು: ಮಹಿಳೆಯರು ಸುಶಿಕ್ಷಿತರು ಆಗಿರುವುದರಿಂದ ಮನೆ ಹಾಗೂ ಸಮಾಜಕ್ಕೆ ದಾರಿ ದೀಪವಾಗಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಪಟ್ಟಣದ ಡೋಣೂರು ಶ್ರೀ ಚಾನುಕೋಟಿ ಮಠದಲ್ಲಿ ಜಿಪಂ, ತಾಪಂ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದೊಂದಿಗೆ ಆಯೋಜಿಸಿದ್ದ ಮಹಿಳಾ ಸಬಲೀಕರಣ ಹಾಗೂ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.
ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಎಲ್ಲ ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿದ್ದಾರೆ. ಸ್ತ್ರೀಯರು ಕಲಿತರೆ ಸಮಾಜದಲ್ಲಿ ಏನೆಲ್ಲ ಬದಲಾಯಿಸಬಲ್ಲರು ಎನ್ನುವುದನ್ನು ಸಮಾಜಕ್ಕೆ ಅರ್ಥೈಸಿದ್ದಾರೆ. ಆದ್ದರಿಂದ ಪಾಲಕರು ಹೆಣ್ಣುಮಕ್ಕಳಿಗೆ ಶಿಕ್ಷಣ ಕಲಿಸುವುದು ಅವಶ್ಯ ಎಂದರು.
ಡೋಣೂರು ಚಾನುಕೋಟಿ ಮಠದ ಡಾ.ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ತಹಸೀಲ್ದಾರ ಅಮರೇಶ್ ಜಿ.ಕೆ., ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ದಾರುಕೇಶ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ವೀಣಾ ವಿವೇಕಾನಂದಗೌಡ, ಜನಜಾಗೃತಿ ವೇದಿಕೆ ಸದಸ್ಯ ಎಂ.ಮಲ್ಲಿಕಾರ್ಜುನ್, ಶಿಕ್ಷಕ ನಾಗರಾಜ್, ಪ್ರಮುಖರಾದ ಅಡಿಕೆ ಮಂಜುನಾಥ, ಪಾರ್ವತಿ ಅಟವಾಳ್ಗಿ ಇತರರಿದ್ದರು.