ಉಜ್ಜಿನಿ ಸಮೀಪದ ನಿಂಬಳಗೆರೆ ಗ್ರಾಮದಲ್ಲಿ ಶ್ರೀ ಕಲ್ಲೇಶ್ವರ ರಥೋತ್ಸವ ಸಂಭ್ರದಿಂದ ಜರುಗಿತು. 
ವಿಜಯನಗರ

ಶ್ರೀ ಕಲ್ಲೇಶ್ವರ ರಥೋತ್ಸವ ಅದ್ದೂರಿ

ಪ್ರಮುಖ ಮುಖ್ಯಾಂಶಗಳು

  • ರಥೋತ್ಸವ

ಶ್ರೀ ಕಲ್ಲೇಶ್ವರ ರಥೋತ್ಸವ ಅದ್ದೂರಿ

ಉಜ್ಜಿನಿ: ಸಮೀಪದ ನಿಂಬಳಗೆರೆ ಗ್ರಾಮದಲ್ಲಿ ಶುಕ್ರವಾರ ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ಕಲ್ಲೇಶ್ವರ ಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿದವು.
ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ಮೂಲಕ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥಕ್ಕೆ ಪ್ರದಕ್ಷಿಣೆ ಹಾಕಿಸಿ, ರಥಕ್ಕೆ ಪೂಜೆ ಸಲ್ಲಿಸಿ ಸ್ವಾಮಿ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಮಾಳ, ನಂದಿಕೋಲು ಹಾಗೂ ವಿವಿಧ ವಾದ್ಯಮೇಳದೊಂದಿಗೆ ಸಂಜೆ ರಥೋತ್ಸವ ಜರುಗಿತು. ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.