ಹಗರಿಬೊಮ್ಮನಹಳ್ಳಿಯಲ್ಲಿ ತಹಸೀಲ್ದಾರ್ ಆರ್.ಕವಿತಾಗೆ ಈರುಳ್ಳಿ ಬೆಳೆಗಾರರ ಸಂಘದಿಂದ ಮನವಿ ಸಲ್ಲಿಸಲಾಯಿತು.  
ವಿಜಯನಗರ

ರಾಗಿ ಖರೀದಿ ಕೇಂದ್ರ ಆರಂಭಿಸಿ

ಅಶೋಕ್ ಕುಮಾರ್ ಎನ್
ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಹಿಂಗಾರು ಹಂಗಾಮಿನ ರಾಗಿ ಖರೀದಿಗೆ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ತೆರೆಯಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಈರುಳ್ಳಿ ಬೆಳೆಗಾರರ ಸಂಘದ ಜಿಲ್ಲಾ ಸಂಚಾಲಕ ಮೈನಳ್ಳಿ ಕೊಟ್ರೇಶಪ್ಪ ಆಗ್ರಹಿಸಿದರು.
ಪಟ್ಟಣದಲ್ಲಿ ತಹಸೀಲ್ದಾರ್ ಆರ್.ಕವಿತಾಗೆ ಬುಧವಾರ ಮನವಿ ಸಲ್ಲಿಸಿ ಮಾತನಾಡಿದರು. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ, ಮೆಕ್ಕೆಜೋಳ, ರಾಗಿ ಬೆಳೆಯಲಾಗಿದೆ, ಸರ್ಕಾರ ಮೆಕ್ಕೆಜೋಳಕ್ಕೆ 3,500 ರೂ. ಬೆಂಬಲ ಬೆಲೆ ನೀಡಬೇಕು. ಈರುಳ್ಳಿ ಬೆಳೆಗಾರರ ಕಷ್ಟ ಅರಿತು ನೆರವಿಗೆ ಬರಬೇಕು. ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಬೆಳೆದ ರಾಗಿ ಮಾತ್ರ ಖರೀದಿಸಲಾಗುತ್ತದೆ. ಹಿಂಗಾರು ಹಂಗಾಮಿನಲ್ಲಿ ರಾಗಿ ಬೆಳೆಯುವ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.
ತಾಲೂಕು ಅಧ್ಯಕ್ಷ ಗುಡ್ಡದ ಮೋಹನ್ ರೆಡ್ಡಿ, ಬನ್ನಿಗೋಳ ಗ್ರಾ.ಪಂ. ಸದಸ್ಯ ಅಳವಂಡಿ ಸಿದ್ದಾರೆಡ್ಡಿ, ಎಚ್.ದೊಡ್ಡಬಸಪ್ಪ, ಉಪ್ಪಾರ ಶಂಕ್ರಪ್ಪ, ಕೆ.ಸುಭಾಷ ಮತ್ತಿತರರು ಇದ್ದರು.