ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಎಂಎಸ್‌ಪಿ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್, ಎಪಿಎಂಸಿ ಅಧಿಕಾರಿ ಓಂಕಾರಪ್ಪ, ಜಿಲ್ಲಾ ವ್ಯವಸ್ಥಾಪಕ ಗುರಪ್ಪ ಕಣಬೂರ್ ಇತರರಿದ್ದರು. 
ವಿಜಯನಗರ

ರಾಗಿ ಖರೀದಿ ಆರಂಭ ಶೀಘ್ರ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಎಂಎಸ್‌ಪಿ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಮತ್ತು ಬಿಳಿ ಜೋಳ ಖರೀದಿಸಲು ಒಟ್ಟು 9 ನೊಂದಣಿ ಮತ್ತು ಖರೀದಿ ಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮತ್ತು ಬಿಳಿ ಜೋಳ ಖರೀದಿ ಕುರಿತ ಆಯೋಜಿಸಲಾಗಿದ್ದ ಎಂಎಸ್‌ಪಿ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ರಾಗಿ ಖರೀದಿಗೆ ನೊಂದಣಿ ಪ್ರಕ್ರಿಯೆಯೂ ಸಹ ಆರಂಭವಾಗಿದೆ. ಜಿಲ್ಲೆಯ ವಿವಿಧ ನೊಂದಣಿ ಕೇಂದ್ರಗಳಲ್ಲಿ 13,694 ರೈತರಿಂದ 4,02410 ಕ್ವಿಂಟಾಲ್ ರಾಗಿ, 392 ರೈತರಿಂದ 33637 ಕ್ವಿಂಟಾಲ್ ಬಿಳಿ ಜೋಳ ಖರೀದಿಗೆ ನೊಂದಾಯಿ ಮಾಡಿಕೊಂಡಿದ್ದಾರೆ. ನೊಂದಣಿ ಮಾಡಿಕೊಂಡ ರೈತರಿಂದ ಶೀಘ್ರದಲ್ಲೇ ರಾಗಿ ಖರೀದಿ ಪ್ರಕ್ರಿಯೆ ಆರಂಬಿಸಲಾಗುವುದು ಎಂದರು.
ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಮಾರಾಟಕ್ಕೆ ರೈತರು ತಮ್ಮ ಹೆಸರನ್ನು ಫ್ರೂಟ್ಸ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡಿರಬೇಕು. ನೊಂದಣಿ ಮಾಡಿಕೊಂಡಿರುವ ರೈತರಿಗೆ ಸರ್ಕಾರದ ಆದೇಶದನ್ವಯ ಪ್ರತಿ ಎಕರೆಗೆ ಕನಿಷ್ಠ 10 ಕ್ವಿಂಟಾಲ್‌ನಿಂದ ಗರಿಷ್ಠ 10 ಕ್ವಿಂಟಾಲ್ ರಾಗಿಯನ್ನು ಪ್ರತಿ ಕ್ವಿಂಟಾಲ್ 4886 ರೂ.ನಂತೆ ಖರೀದಿಸಲಾಗುವುದು. ಅದರಂತೆ ಬಿಳಿಜೋಳ (ಹೈಬ್ರಿಡ್) 3699 ರೂ.ಮತ್ತು ಮಾಲ್ದಂಡಿ ಜೋಳ 3749 ರೂ. ನಂತೆ ಪ್ರತಿ ಎಕರೆಗೆ ಕನಿಷ್ಠ 15 ಕ್ವಿಂಟಾಲ್‌ನಿಂದ ಗರಿಷ್ಠ 150 ಕ್ವಿಂಟಾಲ್ ಖರೀದಿಸಲಾಗುವುದು. ಮಾರುಕಟ್ಟೆಯಲ್ಲಿ ರೈತರಿಂದ ಗುಣಮಟ್ಟದ ಧಾನ್ಯ ಖರೀದಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ನೊಂದಣಿಗೆ ತರುವ ಧಾನ್ಯಗಳಲ್ಲಿ ಕಸ ಇರಬಾರದು. ಖರೀದಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಜರಡಿ ಯಂತ್ರಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.