ಹೊಸಪೇಟೆಯಲ್ಲಿ ಬುಧವಾರ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರಮುಖರಾದ ಕೃಷ್ಣ ಮೊದಲಿಯಾರ್, ಸಣ್ಣ ಮಾರೆಪ್ಪ, ಕೆ.ಎಂ.ಸAತೋಷ ಕುಮಾರ್, ಎನ್.ಯಲ್ಲಾಲಿಂಗ, ಅರ್.ಭಾಸ್ಕರ್ ರೆಡ್ಡಿ, ಬಿಸಾಟಿ ತಾಯಪ್ಪ ನಾಯಕ, ಅಂಜಿನಿ, ವಸಂತ ಕಲಾಲ್, ವಕೀಲರಾದ ಮಹೇಶ್, ಕಲ್ಯಾಣಯ್ಯ ಇತರರಿದ್ದರು.
- ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
ಹೊಸಪೇಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್) ನಿಯಮಾನುಸಾರ ನೋಂದಣಿ ಮಾಡಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಬುಧವಾರ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಿತು.
ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ಗಾಂಧಿ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಬಹಿರಂಗ ಸಭೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಂಚಾಲಕ ಸೋಮಶೇಖರ್ ಬಣ್ಣದಮನೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಾತನಾಡಿ, ದೇಶದ ಸಂವಿಧಾನದ ನಿಯಮಾವಳಿಗಳ ಪ್ರಕಾರ ಪ್ರತಿಯೊಂದು ಸಂಘ-ಸAಸ್ಥೆಗಳೂ ಕಡ್ಡಾಯವಾಗಿ ನೋಂದಣಿ ಪ್ರಕ್ರಿಯೆಗೆ ಒಳಪಡಬೇಕು. ಆದರೆ ಆರ್‌ಎಸ್‌ಎಸ್ ಮಾತ್ರ ಇನ್ನೂ ನೋಂದಣಿಯಾಗದೆ ಕಾರ್ಯನಿರ್ವಹಿಸುತ್ತಿದೆ. ಕೂಡಲೇ ಆರ್‌ಎಸ್‌ಎಸ್ ಅಧಿಕೃತವಾಗಿ ನೋಂದಣಿ ಮಾಡಿಸಬೇಕು ಮತ್ತು ಅದರ ಆರ್ಥಿಕ ಮೂಲ ಹಾಗೂ ಚಟುವಟಿಕೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.