ಹೊಸಪೇಟೆ ಜಿಲ್ಲಾಧಿಕಾರಿಳ ಕಚೇರಿ ಸಭಾಂಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಎಎಸ್ಪಿ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಇತರರಿದ್ದರು. 
ವಿಜಯನಗರ

ವಿಕಲಚೇತನರ ಯೋಜನೆಗೆ ಅರ್ಹರಿಗೆ ಆಸರೆ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ವಿಳಂಬವಿಲ್ಲದೆ ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಳ ಕಚೇರಿ ಸಭಾಂಣದಲ್ಲಿ ಗುರುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ವಿದ್ಯಾರ್ಥಿ ವೇತನ ಹಾಗೂ ಇತರ ಆರ್ಥಿಕ ಸೌಲಭ್ಯಗಳನ್ನು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರವು ಹತ್ತಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೆಚ್ಚಿನ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗದಲ್ಲಿ ಯೋಜನೆ ಸೌಲಭ್ಯಗಳ ಬಗ್ಗೆ ತಿಳಿಸುವುದರ ಜತೆಗೆ ಸಮರ್ಪಕ ಅನುಷ್ಠಾಗೊಳಿಸಬೇಕು. ದೃಷ್ಟಿಹೀನ ಮಹಿಳೆಯರಿಗೆ ನೀಡುವ ಶಿಶುಪಾಲನಾ ಭತ್ಯೆ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಇರುವ ನಿರಾಮಯ ವಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು. ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಆರ್ಥಿಕ ಸಹಾಯ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕಿದೆ. ಆದ್ದರಿಂದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ವಿಕಲಚೇತನರು ಸಮಾಜದ ಅವಿಭಾಜ್ಯ ಅಂಗ. ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಕೇವಲ ಅಂಕಿ-ಅAಶಗಳಿಗೆ ಸೀಮಿತವಾಗಬಾರದು. ವಿವಾಹ ಪ್ರೋತ್ಸಾಹಧನ, ಮರಣ ಪರಿಹಾರ ನಿಧಿ ಹಾಗೂ ವೈದ್ಯಕೀಯ ನೆರವಿನಂತಹ ಯೋಜನೆಗಳು ಸಂಕಷ್ಟದಲ್ಲಿರುವವರಿಗೆ ಆಸರೆಯಾಗಬೇಕು. ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡಿ ಅರ್ಹ ಫಲಾನುಭವಿಗಳ ಗುರುತಿಸಿ ಸೌಲಭ್ಯಗಳ ಸರಿಯಾದ ಸಮಯಕ್ಕೆ ನೀಡಬೇಕು ಎಂದರು.