ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನೇತೃತ್ವದಲ್ಲಿ ಕುಡಿವ ನೀರಿನ ಸಮಸ್ಯೆ ನಿರ್ವಹಣೆ ಸಭೆನಡೆಯಿತು. ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ವಿವೇಕಾನಂದ, ತಹಸೀಲ್ದಾರ್ ಶೃತಿ ಎಂ.ಮಳ್ಳನಗಡ್ರ್, ನಗರಸಭೆ ಪೌರಾಯುಕ್ತ ಶಿವಕುಮಾರ್, ನಗರಾಭಿವೃದ್ಧಿಕೋಶಾದ ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್ ಇತರರಿದ್ದರು. 
ವಿಜಯನಗರ

ಕುಡಿವ ನೀರಿನ ಅಭಾವ ಆಗದಂತೆ ಕ್ರಮ ಕೈಗೊಳ್ಳಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ಜಿಲ್ಲೆಯಲ್ಲಿ ಬೇಸಿಗೆ ತಾಪಮಾನ ಹೆಚ್ಚಾಗುತ್ತಿದ್ದು, ಜನ, ಜಾನುವಾರುಗಳಿಗೆ ಕುಡಿವ ನೀರಿನ ತೊಂದರೆಯಾಗದAತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕುಡಿವ ನೀರಿನ ಸಮಸ್ಯೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಿಸುವ ಗ್ರಾಮ ಪಟ್ಟಿ ಮಾಡಲಾಗಿದೆ. ತಾಲೂಕಿನ 13 ಗ್ರಾ.ಪಂ.ಗಳ ಪೈಕಿ 19 ಗ್ರಾಮಗಳು, ಹರಪನಹಳ್ಳಿ ತಾಲೂಕಿನ 32 ಗ್ರಾ.ಪಂ.ಗಳಲ್ಲಿ 58, ಹಡಗಲಿ ತಾಲೂಕಿನ 13 ಗ್ರಾಂ.ಪA.ನ 32 ಗ್ರಾಮಗಳು, ಹಗರಿಬೊಮ್ಮನಹಳ್ಳಿ ತಾಲೂಕಿನ 16 ಗ್ರಾ.ಪಂ.ನ 24 ಗ್ರಾಮಗಳು, ಕೂಡ್ಲಿಗಿ ತಾಲೂಕಿನ 19 ಗ್ರಾಂ.ಪA.ನಲ್ಲಿ 24 ಗ್ರಾಮಗಳು, ಕೊಟ್ಟೂರು ತಾಲೂಕಿನ 5 ಗ್ರಾ.ಪಂ 8 ಗ್ರಾಮಗಳು ತೀವ್ರ ಕುಡಿವ ನೀರಿನ ಬರ ಎದುರಿಸಲಿರುವ ಗ್ರಾಮಗಳು ಎಂದು ಗುರುತಿಸಲಾಗಿದೆ. ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಕೊಳವೆಬಾವಿಗಳಿಲ್ಲದಿದ್ದರೆ ಖಾಸಗಿ ಕೊಳವೆಬಾವಿಗಳ ಬಾಡಿಗೆ ಪಡೆದು ಸಾರ್ವಜನಿಕರಿಗೆ ನೀರು ಪೂರೈಸಬೇಕು. ಅಥವ ಟ್ಯಾಂಕರ್ ಮೂಲಕ ಶುದ್ಧ ಕುಡಿವ ನೀರನ್ನು ಪೂರೈಸಬೇಕು ಎಂದರು.
ಜಿಲ್ಲೆಯಲ್ಲಿ ಮುಂದಿನ ಏಪ್ರಿಲ್ – ಮೇ ತಿಂಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ. ಜಾನುವಾರುಗಳಿಗಾಗಿ ನೀರಿನ ತೊಟ್ಟಿ ನಿರ್ಮಿಸಲಾಗಿದೆ. ಆಯಕಟ್ಟಿನ ತೊಟ್ಟಿಗಳಲ್ಲಿ ಸದಾ ನೀರು ತುಂಬಿರುವAತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಎಪಿಎಂಸಿ ಮಾರುಕಟ್ಟೆಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಹಂಪಿಯಲ್ಲಿ ದೇಶ ವಿದೇಶಗಳಿಂದ ಪ್ರವಾಸಿಗರಿಗೆ ಅನುಕೂಲ ಆಗುವಂತೆ ಕುಡಿವ ನೀರು ಮತ್ತು ಸಾಧ್ಯವಾದಲ್ಲಿ ವಿಶ್ರಾಂತಿ ಪಡೆಯಲು ನೆರಳಿನ ವ್ಯವಸ್ಥೆ ಮಾಡಬೇಕು. ಬಿಸಿಲಿನ ತಾಪ ಹೆಚ್ಚಾಗುವುದರಿಂದ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು. ಸ್ವಚ್ಚವಾಹಿನಿಗಳಲ್ಲಿ ಆಡಿಯೋ ಪ್ಲೇ ಮಾಡುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಸೂಚನೆ ನೀಡಿದರು.