ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯನ್ನು 150 ಹಾಸಿಗೆಗೆ ಮೆಲ್ದರ್ಜೆಗೆ ಏರಿಸುವ ಹಾಗೂ ತಾಯಿ-ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾರ್ಯಕ್ರಮಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು.
ಕೂಡ್ಲಿಗಿ: ತಾಲೂಕಿನಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡುವುದು ಹಾಗೂ ಅವರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ವಿಭಾಗ ಆರಂಭಿಸಲಾಗುತ್ತಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯನ್ನು 100ರಿಂದ 150 ಹಾಸಿಗೆಗೆ ಹೆಚ್ಚಳ ಮಾಡುವುದು ಹಾಗೂ ತಾಯಿ-ಮಕ್ಕಳ ವಿಭಾಗ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಂಗಳವಾರ ಮಾತನಾಡಿದರು. ಸರ್ಕಾರದ ಮಾನದಂಡಗಳ ಪ್ರಕಾರ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈಗಿರುವ ಆಸ್ಪತ್ರೆಯನ್ನು 100ರಿಂದ 150 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವ ಮೂಲಕ 50 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಮಾಡಿ, ಅಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯದ ನಿಗಾ ವಹಿಸಲಾಗುವುದು. ಇಡೀ ರಾಜ್ಯದಲ್ಲಿಯೇ 150 ಹಾಸಿಗೆಗೆ ಮೇಲ್ದರ್ಜೆಗೆ ಏರಿದ ಏಕೈಕ ಸಾರ್ವಜನಿಕ ಆಸ್ಪತ್ರೆ ನಮ್ಮದಾಗಿದೆ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ಎಸ್.ಪಿ.ಪ್ರದೀಪ್, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಸಿ.ಮಧು, ಲೋಕೋಪಯೋಗಿ ಇಲಾಖೆ ಎಇಇ ಕೆ.ನಾಗನಗೌಡ, ಎಪಿಎಂಸಿ ಅಧ್ಯಕ್ಷ ಬೋಸಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಬಸವರಾಜ, ತಳವಾರ ಶರಣಪ್ಪ, ತಾಲೂಕು ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಹೊನ್ನೂರಪ್ಪ, ಡಿ.ಎಚ್.ದುರುಗೇಶ, ಪಸುಲು ಪಾಲಯ್ಯ, ನಜೀರ್ ಸಾಬ್, ಡಿ.ಬಿ.ಚಿತ್ತಪ್ಪ, ವೀರಭದ್ರಪ್ಪ, ಪ್ರಮುಖರಾದ ಕಾವಲ್ಲಿ ಶಿವಪ್ಪ ನಾಯಕ, ಹಿರೇಕುಂಬಳಗುಂಟೆ ಉಮೇಶ, ಉದಯ ಜನ್ನು, ಟಿ.ಜಿ. ಮಲ್ಲಿಕಾರ್ಜುನ ಗೌಡ, ಎರ‌್ರಿಸ್ವಾಮಿ, ಡಾಣಿ ರಾಘವೇಂದ್ರ ಇದ್ದರು.