ಹೊಸಪೇಟೆಯಲ್ಲಿ ಶುಕ್ರವಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಮಟೆ ಚಳುವಳಿ ನಡೆಯಿತು. 
ವಿಜಯನಗರ

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ತಮಟೆ ಚಳುವಳಿ

ಹೊಸಪೇಟೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದಲ್ಲಿ ಮಂಗಳವಾರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ತಮಟೆ ಚಳುವಳಿ ನಡೆಸಲಾಯಿತು.
ನಗರದ ಐತಿಹಾಸಿಕ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತಮಟೆ ಬಾರಿಸುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆಯು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜತೆಗಿನ ಚೆಲ್ಲಾಟ ಹಾಗೂ ಕೇಂದ್ರದ ಸಂವಿಧಾನ ವಿರೋಧಿ ಧೋರಣೆಯ ಸಂಕೇತ ಎಂದು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಹರಿಹಾಯ್ದ ಹೋರಾಟಗಾರರು, ಶೀಘ್ರವೇ ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾನಾ ಘೋಷಣೆಗಳನ್ನು ಕೂಗಿದರು.
ಬಿಕರಿಗೊಂಡ ನೀಟ್ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ, ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೆ ತಮಟೆ ಬಾರಿಸುತ್ತಲೇ ಮೆರವಣಿಗೆ ನಡೆಸಿ, ಸ್ಥಳೀಯ ತಹಸೀಲ್ ಕಚೇರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.