ಹಗರಿಬೊಮ್ಮನಹಳ್ಳಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯದಲ್ಲಿ ವಿಜಯನಗರ ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ ಆಹಾರ ದಾಸ್ತಾನು ಪರಿಶೀಲಿಸಿದರು.
ಹಗರಿಬೊಮ್ಮನಹಳ್ಳಿ: ಪಟ್ಟಣದ ಚಿಂತ್ರಪಳ್ಳಿ ಮಾರ್ಗದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯಕ್ಕೆ ವಿಜಯನಗರ ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಹಾಸ್ಟೆಲ್ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರ ಬಯೋಮೆಟ್ರಿಕ್ ಪರೀಕ್ಷಿಸುವ ಮೂಲಕ ದಾಖಲಾತಿ ಪರಿಶೀಲಿಸಿದರು. ಆಹಾರ ಸಂಗ್ರಹ ಕೊಠಡಿಯಲ್ಲಿ ದಾಸ್ತಾನು ನೋಡಿದರು. ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡರು.