ಹಗರಿಬೊಮ್ಮನಹಳ್ಳಿ ರಾಮನಗರದ ಈಶ್ವರ ದೇಗುಲದ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ತಾಯಿ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಹಗರಿಬೊಮ್ಮನಹಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಯುವ ಸಮೂಹಕ್ಕೆ ಪ್ರೇರಣೆಯಾಗಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಹೇಳಿದರು.
ಪಟ್ಟಣದ ರಾಮನಗರದ ಈಶ್ವರ ದೇಗುಲ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ಸಂಘಟನಾತ್ಮಕ ಸಭೆ, ಸ್ವಚ್ಛತಾ ಅಭಿಯಾನ ಮತ್ತು ತಾಯಿ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು. ಸ್ವಚ್ಛ ಭಾರತ ಅಭಿಯಾನ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ ಅನೇಕ ಯೋಜನೆಗಳಿಂದ ಪ್ರೇರಿತರಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾರೆ ಎಂದರು.
ಯುವಕರು ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ತಾಯಿ ಹೆಸರಿನಲ್ಲಿ ಸಸಿ ನೆಡುವುದು ಗೌರವದ ಪ್ರತೀಕವಾಗಿದೆ. ಪರಿಸರದ ಕಾಳಜಿ ಕೂಡ ಪ್ರದರ್ಶಿಸಬೇಕು. ಭಾರತದ ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನೀಡಿರುವ ನರೇಂದ್ರ ಮೋದಿ ಅವರ ಸೇವೆ ದೇಶಕ್ಕೆ ಇನ್ನಷ್ಟು ಬೇಕಾಗಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಚ್.ಎಂ.ಸಚಿನ್ ಕುಮಾರ್, ಸಂಗಮೇಶ ಕಡೇಮನಿ, ಸಂಪತ್‌ಮೂರ್ತಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾಲವಿ ಇತರರಿದ್ದರು.