ಹಂಪಿ ಶ್ರೀ ಕೋದಂಡರಾಮ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಶ್ರೀ ಕೋದಂಡರಾಮ ರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿAದ ಜರುಗಿತು.
ರಥೋತ್ಸವದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ, ಅಭಿಷೇಕ, ಸಹಸ್ರ ನಾಮಾರ್ಚನೆ, ಸೀತಾರಾಮ ಕಲ್ಯನೋತ್ಸವ ಜರುಗಿತು. ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ನೆರವೇರಿತು. ಆನಂತರ ರಥೋತ್ಸವವು 12.30ಕ್ಕೆ ದೇಗುಲದಿಂದ ಹೊರಟು ಅಚ್ಚುರಾಮ ದೇಗುಲದ ವರೆಗೆ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಸಂಜೆ ಮತ್ತೆ ದೇವಾಲಯ ತಲುಪಿತು. ಭಕ್ತರು ಜೈ ಶ್ರೀ ರಾಮ್ ಘೋಷಣೆ ಕೂಗುತ್ತ ರಥಕ್ಕೆ ಹೂ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ರಥೋತ್ಸವ ನಿಮಿತ್ತ ಹಲವೆಡೆ ಭಕ್ತರಿಗೆ ಪಾನಕ, ಮಜ್ಜಿಗೆ ನೀಡಲಾಯಿತು. ರಥೋತ್ಸವಕ್ಕೆ ಸುತ್ತಮುತ್ತಲ್ಲಿನ ಗ್ರಾಮಸ್ಥರು ಸೇರಿ ಹೊರ ರಾಜ್ಯಗಳಿಂದಲೂ ನೂರಾರು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.