ಹೊಸಪೇಟೆ ಬಿಜೆಪಿ ಕಛೇರಿಯಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾ ಘಟಕದಿಂದ ಆತ್ಮನಿರ್ಭರ ಭಾರತ ಯುವ ಸಮಾವೇಶವನ್ನು ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಉದ್ಘಾಟಿಸಿದರು.  
ವಿಜಯನಗರ

ರಾಜಕೀಯದಲ್ಲಿ ಯುವಕರ ಪಾತ್ರ ಮುಖ್ಯ

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಕರೆ
ಹೊಸಪೇಟೆ: ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾ ಘಟಕದಿಂದ ಆತ್ಮನಿರ್ಭರ ಭಾರತ ಯುವ ಸಮಾವೇಶ ನಡೆಯಿತು.
ಮಾಜಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ಬಿಜೆಪಿಯ 7 ಮೋರ್ಚಾಗಳಲ್ಲಿ ಯುವ ಮೋರ್ಚಾ ಹೆಚ್ಚಿನ ಜವಾಬ್ದಾರಿ ಇದೆ. ಮಹಿಳಾ ಮೋರ್ಚಾ, ರೈತ ಮೋರ್ಚಾ ಗಳು ಮಹಿಳೆಯರು ಮತ್ತು ರೈತರಿಗೆ ಮೀಸಲಾದರೆ, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಎಲ್ಲಾ ಕ್ಷೇತ್ತದಲ್ಲಿ ಕೆಲಸ ಮಾಡುವ ಅವಕಾಶವಿದೆ. ಅದಕ್ಕಾಗಿ ಯುವ ಮೋರ್ಚಾ ಮುಖಂಡರುಗಳು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಬೂತ್ ನಲ್ಲಿ 10 ಜನ ಯುವಕರ ತಂಡವನ್ನು ರಚನೆ ಮಾಡಬೇಕು. ಮುಂಬರುವ ದಿನಗಳಲ್ಲಿ ಯುವಕರು ಮತ್ತು ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಇರುವುದರಿಂದ ಮಹಿಳೆಯುರು ಮತ್ತು ಯುವಕರು ಹೆಚ್ಚಾಗಿ ರಾಜಕೀಯಕ್ಕೆ ಬರಬೇಕು. ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರೆ, ಪಕ್ಷ ಆಂತಹವರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಪಕ್ಷದ ಮುಖಂಡರುಗಳು ಯುವಕರನ್ನು ಹೆಚ್ಚು ಹೆಚ್ಚಾಗಿ ಪಕ್ಷಕ್ಕೆ ಸೆಳೆಯಬೇಕು. ಆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದರು.
ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ.ಮಲ್ಲಿಕಾರ್ಜುನ ಬಾಳೆಕಾಯಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಪ್ರಮುಖರಾದ ಶಂಕರ್ ಮೇಟಿ, ಸಚಿನ್ ಕುಮಾರ್, ಪ್ರಕಾಶ್, ವಿನೋದ್, ಸಂಗಮೇಶ್, ಸೂರ್ಯ ಬಂಗಾರು ಇತರರಿದ್ದರು .