ಕೊಟ್ಟೂರಿನಲ್ಲಿ ತಾಲೂಕು ಅಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜವಂದನೆ ಸಲ್ಲಿಸಲಾಯಿತು. ಶಾಸಕ ಕೆ.ನೇಮಿರಾಜ ನಾಯ್ಕ, ತಹಸೀಲ್ದಾರ್ ಜಿ.ಕೆ.ಅಮರೇಶ್, ತಾಪಂ ಇಒ ಡಾ. ಬಿ.ಆನಂದಕುಮಾರ್ ಇತರರಿದ್ದರು.  
ವಿಜಯನಗರ

ಭಾರತದತ್ತ ವಿಶ್ವವೇ ತಿರುಗಿ ನೋಡುತ್ತಿದೆ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ನೇಮಿರಾಜ್ ನಾಯ್ಕ ಅಭಿಪ್ರಾಯ
  • ಕೊಟ್ಟೂರು ಗಣರಾಜೋತ್ಸವ ಸಮಾರಂಭ
ಕೊಟ್ಟೂರು: ದಕ್ಷ ಆಡಳಿತದ ಜತೆಗೆ ದೇಶದ ತಂತ್ರಜ್ಞಾನದ ಬೆಳವಣಿಗೆ ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಅಭಿಪ್ರಾಯಪಟ್ಟರು.
ಪಟ್ಟಣದ ಗೊರ್ಲಿ ಶರಣಪ್ಪ ಸರ್ಕಾರಿ ಪದವಿಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಸ್ವಾತಂತ್ರೃದ ನಂತರ ದೇಶದ ಆಡಳಿತ ಸುಗಮವಾಗಿ ನಡೆಸಲು ರೂಪಿಸಿದ ನಮ್ಮ ಲಿಖಿತ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿದ್ದ ಲೋಪಗಳನ್ನು ಸರಿಪಡಿಸಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಎಂದು ಬದಲಾಯಿಸಿ ಮಾನವ ದಿನಗಳನ್ನು 100 ರಿಂದ 125 ಕ್ಕೆ ಹೆಚ್ಚಿಸಿ ಬಡವರ ಮತ್ತು ಕೂಲಿ ಕಾರ್ಮಿಕರ ಅನುಕೂಲಕ್ಕೆ ಪ್ರಧಾನಿ ಮೋದಿ ಅವರು ನೆರವಾಗಿದ್ದಾರೆ ಎಂದರು.
ತಹಸೀಲ್ದಾರ್ ಜಿ.ಕೆ.ಅಮರೇಶ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜವಂದನೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ್, ತಾಪಂ ಇಒ ಡಾ. ಬಿ.ಆನಂದಕುಮಾರ್, ಎಡಿ ಎಚ್.ವಿಜಯ ಕುಮಾರ್, ಸಿಪಿಐ ಡಿ.ದುರುಗಪ್ಪ, ಪಪಂ ಮುಖ್ಯಾಧಿಕಾರಿ ಎ.ನಸರುಲ್ಲಾ, ಪಿಎಸ್‌ಐ ಗೀತಾಂಜಲಿ ಶಿಂಧೆ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಯೋಗಿಶ್ವರ ದಿನ್ನೆ ಇತರರಿದ್ದರು.