ಹೊಸಪೇಟೆಯಲ್ಲಿ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಉಪನಿರ್ದೇಶಕ ಗಂಗಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಾವೇದ್, ಹುಡಾ ಅಧ್ಯಕ್ಷ ಎಚ್.ಎನ್.ಮೊಹಮದ್ ಇಮಾಮ್ ನಿಯಾಜಿ, ಬಿಇಒ ಬಿ.ಉಮಾಪತಿ ಇತರರಿದ್ದರು. 
ವಿಜಯನಗರ

ದಾಖಲೆಗಳ ನಿರ್ವಹಣೆಯಲ್ಲಿ ಲೋಪ ಸಲ್ಲ

ಪ್ರಮುಖ ಮುಖ್ಯಾಂಶಗಳು

  • ಅಂಗನವಾಡಿಗಳಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ ಪರಿಶೀಲನೆ
ಹೊಸಪೇಟೆ: ಜಿಲ್ಲೆಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ದಾಖಲೆಗಳ ನಿರ್ವಹಣೆ ಸರಿಯಾಗಿಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್, ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ವಿಜಯನಗರ ಜಿಲ್ಲಾ ಪ್ರವಾಸದಲ್ಲಿರುವ ಆಯೋಗದ ಅಧ್ಯಕ್ಷರು, ಸೋಮವಾರ ನಗರದ ಬಾಪೂಜಿ ಸರ್ಕಾರಿ ಉರ್ದು ಶಾಲೆ, ಹಳೇ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಅಂಜುಮನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರದ ಪರಿಶೀಲನೆ ವೇಳೆ, ಮಕ್ಕಳಿಗೆ ಸಂಬAಧಿಸಿದ ದಾಖಲಾತಿಗಳು ಸಮರ್ಪಕವಾಗಿ ನಿರ್ವಹಣೆಯಾಗದಿರುವುದು ಕಂಡುಬAತು. ಮಂಜೂರಾದ ಮಕ್ಕಳ ಸಂಖ್ಯೆ, ಹಾಜರಾತಿ ಹಾಗೂ ಶಾಲೆ ತೊರೆದ ಮಕ್ಕಳ ಕುರಿತಾದ ನಿಖರ ಮಾಹಿತಿ ನೀಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ವಿಫಲರಾದರು. ಈ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ತಕ್ಷಣವೇ ದಾಖಲೆಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಮತ್ತು ಅಂಗನವಾಡಿಗಳಲ್ಲಿ ದಾಖಲಾತಿ ಹಾಗೂ ಮಂಜೂರಾತಿ ಪ್ರಕ್ರಿಯೆಗಳಲ್ಲಿ ಗಂಭೀರ ಲೋಪಗಳು ಕಂಡುಬAದಿವೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು. ಕರ್ತವ್ಯಲೋಪ ಎಸಗಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.