ಹೊಸಪೇಟೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಚಿತ್ತವಾಡ್ಗಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪಿಐ ಸೋಮ್ಲಾನಾಯ್ಕ, ಜಾವಿದ್, ಬಸವರಾಜ್, ಕೊಟೇಶ್, ರಾಜು ಇತರರಿದ್ದರು.
ಹೊಸಪೇಟೆ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಚಿತ್ತವಾಡ್ಗಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ನಗರದ ಸಿದ್ದಿಪ್ರಿಯ ಕಲ್ಯಾಣ ಮಂಟಪದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸ್ಥಳಿಯ ನಿವಾಸಿಗಳಾದ ಸತೀಶ್ ಕುಮಾರ್ ಹಾಗೂ ಚಿನ್ನಬಾಲು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿAದ ಅಂದಾಜು 60 ಸಾವಿರ ರೂ ಮೌಲ್ಯದ 1200 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.