ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳ್ ತಾಂಡದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಘಟಕದ ನಾಮಫಲಕವನ್ನು ಸೋಮವಾರ ಅನಾವರಣಗೊಳಿಸಲಾಯಿತು.
ಹಗರಿಬೊಮ್ಮನಹಳ್ಳಿ: ಮರಬ್ಬಿಹಾಳ ತಾಂಡದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕವನ್ನು ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಸೋಮವಾರ ಉದ್ಘಾಟಿಸಿದರು.
ರಾಜ್ಯದ ರೈತರು ಉಳಿವಿಗಾಗಿ ಹೋರಾಟ ಮಾಡಬೇಕಾಗಿದೆ. ಹೋರಾಟಕ್ಕೆ ಒಗ್ಗಟ್ಟು ಮುಖ್ಯ, ಒಗ್ಗಟ್ಟಿನಿಂದ ಏನನ್ನಾದರೂ ಸಾಧಿಸಬಹುದು ಎಂದು ತಿಳಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಗೋಣಿಬಸಪ್ಪ, ತಾಲೂಕು ಅಧ್ಯಕ್ಷ ಬಸವನಗೌಡ, ಪ್ರಧಾನ ಕಾರ್ಯದರ್ಶಿ ಎ.ನಾಗರಾಜ್, ವಿಜಯನಗರ ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿಕುಮಾರ್ ತಂಬ್ರಹಳ್ಳಿ ಇದ್ದರು.