ಹೊಸಪೇಟೆ ಎಂಸಿಎಚ್ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಮಹಾ ಅಭಿಯಾನಕ್ಕೆ ಬೆಂಗಳೂರಿನ ಎನ್.ವಿ.ಬಿ.ಡಿ.ಸಿ.ಪಿ ವಿಭಾಗದ ಪ್ರಾದೇಶಿಕ ಅಧಿಕಾರಿ ಡಾ.ನಾಗರಾಜ್ ಮಗುವಿಗೆ ಪೋಲಿಯೋ ಹಾಕುವ ಮೂಲಕ ಚಾಲನೆ ನೀಡಿದರು. ಡಿಎಚ್ಒ ಡಾ.ಎಲ್.ಆರ್.ಶಂಕರ್ ನಾಯ್ಕ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಂಬಯ್ಯ, ಟಿಎಚ್ಒ ಡಾ.ವಿನೋದ್ ಇತರರಿದ್ದರು.
- ಬೆಂಗಳೂರಿನ ಎನ್.ವಿ.ಬಿ.ಡಿ.ಸಿ.ಪಿ ವಿಭಾಗದ ಪ್ರಾದೇಶಿಕ ಅಧಿಕಾರಿ ಡಾ.ನಾಗರಾಜ್ ಕರೆ
ಹೊಸಪೇಟೆ: ರಾಷ್ಟ್ರವನ್ನು ಪೋಲಿಯೊದಿಂದ ಮುಕ್ತಗೊಳಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಬೆಂಗಳೂರಿನ ಎನ್.ವಿ.ಬಿ.ಡಿ.ಸಿ.ಪಿ ವಿಭಾಗದ ಪ್ರಾದೇಶಿಕ ಅಧಿಕಾರಿ ಡಾ.ನಾಗರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಎಂಸಿಎಚ್ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಮಹಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಇಲ್ಲಿನ ಎಂಸಿಎಚ್ ಆಸ್ಪತ್ರೆಯಲ್ಲಿ ಭಾನುವಾರ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಪೋಲಿಯೊ ನಿರ್ಮೂಲನೆ ಮಾಡಲಾಗಿದೆ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ರಾಷ್ಟ್ರೀಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪಾಲಕರು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು. ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹನಿ ಹಾಕಿಸಬೇಕು. ನಾಲ್ಕು ದಿನ ನಾನಾ ಕಡೆಗಳಲ್ಲಿ ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಬರುತ್ತಾರೆ. ಪಾಲಕರು ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು ಎಂದರು.
ಡಿಎಚ್ಒ ಡಾ.ಎಲ್.ಆರ್.ಶಂಕರ್ ನಾಯ್ಕ ಮಾತನಾಡಿ, ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದ ಒಟ್ಟು 1,29,680 ಮಕ್ಕಳಿಗೆ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1033 ಭೂತಗಳ ಸ್ಥಾಪಿಸಲಾಗಿದೆ. ಐದು ಸಂಚಾರಿ ತಂಡ ಮಾಡಲಾಗಿದೆ. ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಸೇರಿದಂತೆ ಇತರೆ 57 ಕೇಂದ್ರಗಳನ್ನು ಪೋಲಿಯೋ ಹಾಕಲಾಗುತ್ತದೆ ಎಂದರು.
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳು ಡಾ.ಜಂಬಯ್ಯ, ಟಿಎಚ್ಒ ಡಾ.ವಿನೋದ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನೂರ್ ಭಾಷಾ, ಡಾ.ಚಂದ್ರಮೋಹನ್, ಡಾ. ಹರ್ಷಿತಾ ಕುಲಕರ್ಣಿ ಇತರರಿದ್ದರು.