ಹೊಸಪೇಟೆ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಉದ್ಘಾಟಿಸಿದರು. ಡಿಎಚ್‌ಓ ಡಾ.ಎಲ್.ಆರ್.ಶಂಕರ್ ನಾಯ್ಕ, ಪಶುಸಂಗೋಪನೆ ಇಲಾಖೆ ಡಿಡಿ ರವಿ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಅನುಷ್ಠಾನಾಧಿಕಾರಿ ಷಣ್ಮುಖ ನಾಯ್ಕ ಇತರರಿದ್ದರು. 
ವಿಜಯನಗರ

ಡೆಂಗ್ಯೂ ನಿಯಂತ್ರಣದಲ್ಲಿ ವಿಜಯನಗರ ರಾಜ್ಯಕ್ಕೆ ಮಾದರಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿಕೆ
ಹೊಸಪೇಟೆ: ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಮಲೇರಿಯಾ, ಕಾಲರಾದಂತಹ ಮಾರಣಾಂತಿಕ ರೋಗಗಳಿಂದ ಮುಕ್ತ ಜಿಲ್ಲೆಯಾಗಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಇನ್ನೇನು ಮುಂಗಾರು ಮಳೆ ಆರಂಭವಾಗುತ್ತಿದ್ದು, ಕಲುಷಿತ ನೀರು, ಹವಾಮಾನ ವೈಪರೀತ್ಯದಿಂದಾಗಿ ಡೆಂಗ್ಯೂ, ಮಲೇರಿಯಾ, ಕಾಲರಾದಂತಹ ಸಾಂಕ್ರಾಮಿಕ ರೋಗಗಳ ಉಲ್ಬಣಗೊಳ್ಳುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರಿಗೆ ಸ್ಥಳೀಯ ಆಡಳಿತ ಸಂಸ್ಥೆ ಸ್ವಚ್ಚ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಬೇಕು. ಒಂದು ವೇಳೆ ಪೈಪ್‌ಲೈನ್ ದುರಸ್ಥಿ ಇನ್ನಿತರೆ ಕಾರಣಗಳಿಂದ ಕಲುಷಿತ ನೀರು ಸರಬರಾಜಾಗಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾದಲ್ಲಿ ಸಂಬAಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸುವುದಲ್ಲದೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಳೆದ ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. 2023-24ರಲ್ಲಿ 323 ರಷ್ಟಿದ್ದ ಪ್ರಕರಣಗಳು, ಪ್ರಸಕ್ತ ಸಾಲಿನಲ್ಲಿ ಕೇವಲ 14ಕ್ಕೆ ಇಳಿಕೆಯಾಗಿವೆ. ಆರೋಗ್ಯ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಮತ್ತು ಸಾಧನೆಯಿಂದ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಜಿಲ್ಲಾದ್ಯAತ 15 ವರ್ಷದೊಳಗಿನ ಒಟ್ಟು 15,000 ಮಕ್ಕಳನ್ನು ತಲುಪುವ ಗುರಿ ಹೊಂದಲಾಗಿದ್ದು, ಪ್ರಸ್ತುತ ಶೇ.35 ರಷ್ಟು ಪ್ರಗತಿಯಾಗಿದೆ. ಬಾಕಿ ಉಳಿದಿರುವ ಗುರಿಯನ್ನು ವ್ಯವಸ್ಥಿತವಾಗಿ ತಲುಪಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಗ್ರಾಮ ಅಥವಾ ವಾಡ್‌ವಾರು ಲಸಿಕಾ ಅಭಿಯಾನ ಕೈಗೊಳ್ಳಬೇಕು. ಈ ಬಗ್ಗೆ ಪೋಷಕರಲ್ಲಿ ಭೀತಿಯ ಭಾವನೆ ಇದ್ದು ಸಹಕರಿಸುತ್ತಿಲ್ಲ. ಆದ್ದರಿಂದ ಹದಿಹರೆಯದ ಮಕ್ಕಳಲ್ಲಿ ಉಂಟಾಗುವ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯಿಂದಾಗುವ ಪರಿಣಾಮವನ್ನು ಪೋಷಕರಿಗೆ ಅರ್ಥೈಸಬೇಕಿದೆ ಎಂದರು.