ಹೂವಿನಹಡಗಲಿ ಜಿಪಿಜಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ನಮೂದಿಸುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿಬ್ಬಂದಿ.  
ವಿಜಯನಗರ

ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿ

ಅಶೋಕ್ ಕುಮಾರ್ ಎನ್
ಹೂವಿನಹಡಗಲಿ: ತಾಲೂಕಿನ ಒಂಬತ್ತು ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
1556 ಬಾಲಕರು, 1486 ಬಾಲಕಿಯರು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಪಟ್ಟಣದ ಎರಡು, ಹೊಳಲು, ಹಿರೇಹಡಗಲಿ, ಬೂದನೂರು, ಉತ್ತಂಗಿ, ನಾಗತಿಬಸಾಪುರ, ಸೋವೆನಹಳ್ಳಿ ಗ್ರಾಮದ ತಲಾ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಒದಗಿಸಲಾಗಿದೆ ಎಂದು ಬಿಇಒ ಮಹೇಶ್ ಪೂಜಾರ ತಿಳಿಸಿದ್ದಾರೆ.