- ಎಸ್.ಐ.ಆರ್. ಸರ್ಕಾರದ ವಿರುದ್ಧದ ಟೀಕೆಗಳಿಗೆ ತಿರುಗೇಟು ನೀಡಿದ ಸಚಿವ ಜಾರ್ಜ್ ಕೆ.ಜೆ.ಜಾರ್ಜ್ ಹೇಳಿಕೆ
ಹೊಸಪೇಟೆ: ರಾಜ್ಯದಲ್ಲಿ ಚುನಾವಣಾ ಆಯೋಗ ಜಾರಿಗೆ ತಂದಿರುವ ಎಸ್.ಐ.ಆರ್ ಪ್ರಕ್ರಿಯೆಯು ಇದೀಗ ತೀವ್ರ ಚರ್ಚೆ ಮತ್ತು ಗೊಂದಲಗಳಿಗೆ ಕಾರಣವಾಗಿದೆ ಇಂದನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಆಯೋಗದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಭಾಗಿಯಾಗಿವೆ. ಈ ಪ್ರಕ್ರಿಯೆಯನ್ನು ಜಾರಿಗೊಳಿಸಿರುವುದು ಚುನಾವಣಾ ಆಯೋಗವೇ ಹೊರತು ಸರ್ಕಾರವಲ್ಲ. ಆಯೋಗದ ಫಾರಂ ಅನ್ನು ಅಧಿಕಾರಿಗಳೇ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬಿ.ಎಲ್.ಒ.ಗಳ ಮೂಲಕ ಫಾರಂ ಭರ್ತಿ ಮಾಡಿಸುತ್ತಿರುವ ಕುರಿತ ಟೀಕೆಗಳಿಗೆ ಉತ್ತರಿಸಿದ ಸಚಿವರು, ಅನಕ್ಷರಸ್ಥರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ಬಿ.ಎಲ್.ಒ.ಗಳು ಫಾರಂ ತುಂಬುವ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನಿದೆ? ಬಿ.ಎಲ್.ಒಗಳು ಮನೆ ಮನೆಗೆ ಹೋಗುತ್ತಿಲ್ಲ ಎಂಬ ಆರೋಪ ಸತ್ಯಕ್ಕೆ ದೂರವಾದುದು ಎಂದು ತಳ್ಳಿಹಾಕಿದರು. ಈ ಮೂಲಕ ಸರ್ಕಾರದ ಅಧಿಕಾರಿಗಳ ಕಾರ್ಯವೈಖರಿಯನ್ನು ಸಚಿವರು ಬಲವಾಗಿ ಸಮರ್ಥಿಸಿಕೊಂಡಿದ್ದು, ಈ ವಿಷಯ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.