ಪದವಿ ಕಾಲೇಜುಗಳಲ್ಲಿ ಶುಲ್ಕ ಏರಿಕೆ ಖಂಡಿಸಿ ಎಐಎಸ್ ಒ ಸಂಘಟನೆಯಿAದ ಹೊಸಪೇಟೆ ಶಂಕರ್ ಆನಂದ್ ಸಿಂಗ್ ಕಾಲೇಜಿನ ಪ್ರಾಂಶುಪಾಲ ವೀರಭದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ, ಜಿಲ್ಲಾ ಜಂಟಿ ಕಾರ್ಯದರ್ಶಿಗಳಾದ ಆದಿತ್ಯ, ಜ್ಞಾನೇಶ್ ಇತರರಿದ್ದರು.
- ಎಐಡಿಎಸ್ ಒ ಸಂಘಟನೆಯಿAದ ಪ್ರಾಂಶುಪಾಲರಿಗೆ ಮನವಿ ಸಲ್ಲಿಕೆ
ಹೊಸಪೇಟೆ: ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಪದವಿ ವಿದ್ಯಾರ್ಥಿಗಳ ಶುಲ್ಕವನ್ನು ಏಕಾಏಕಿ 1,300 ರೂ. ಹೆಚ್ಚಿಸಿರುವುದನ್ನು ಖಂಡಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಎಸ್ ಒ) ಸಂಘಟನೆಯ ವತಿಯಿಂದ ಇಲ್ಲಿನ ಶಂಕರ್ ಆನಂದ್ ಸಿಂಗ್ ಕಾಲೇಜಿನ ಪ್ರಾಂಶುಪಾಲರ ಮೂಲಕ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಲಾಯಿತು.
ವಿಜಯನಗರ ಜಿಲ್ಲಾ ಕಾರ್ಯದರ್ಶಿ ಯು.ಉಮಾದೇವಿ ಮಾತನಾಡಿ, ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬಹುತೇಕ ಬಡ, ಮಧ್ಯಮ ವರ್ಗ ಹಾಗೂ ರೈತ-ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳೇ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ವಸತಿ, ಶಿಕ್ಷಣ ಸಾಮಗ್ರಿಗಳ ವೆಚ್ಚ ಹೆಚ್ಚಾಗಿದ್ದು, ಹಲವರು ಭಾಗಶಃ (ಪಾರ್ಟ್ ಟೈಮ್) ಕೆಲಸ ಮಾಡುತ್ತಾ ಓದುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಕ್ಷಣಕ್ಕೆ 1,300 ರೂ ಶುಲ್ಕ ಹೆಚ್ಚಿಸಿರುವುದು ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಭಾರೀ ಆರ್ಥಿಕ ಹೊರೆಯಾಗಿದ್ದು, ಅನೇಕರು ಉನ್ನತ ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ವಿದ್ಯಾರ್ಥಿಗಳ ಹೆಚ್ಚಿಸಿದ ಶುಲ್ಕವನ್ನು ತಕ್ಷಣವೇ ಹಿಂಪಡೆಯಬೇಕು. ಈಗಾಗಲೇ ಪಾವತಿಸಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಮೊತ್ತವನ್ನು ತಕ್ಷಣ ಹಿಂದಿರುಗಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಲ್ಕ ಪಾವತಿಯ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ಒತ್ರಾಯಿಸಿದರು.