ಕೆಂಚನಗುಡ್ಡ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಅಶೋಕ್ ಆರ್.ಎಚ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಸಿ.ಎರಿಸ್ವಾಮಿ ಇತರರಿದ್ದರು.
ನ್ಯಾಯಾಧೀಶ ಅಶೋಕ್ ಆರ್.ಎಚ್ ಅಭಿಪ್ರಾಯ
ಸಿರಗುಪ್ಪ: ನಾಗರಿಕ ಸಮಾಜದ ಅಸ್ತಿತ್ವಕ್ಕೆ ಮಾನವ ಹಕ್ಕುಗಳೇ ತಳಪಾಯವಾಗಿದ್ದು, ಹಕ್ಕುಗಳ ಉಲ್ಲಂಘನೆಯಾದಲ್ಲಿ ಜನರು ಅವುಗಳ ಸಂರಕ್ಷಣೆಗೆ ನ್ಯಾಯಾಲಯದ ಮೊರೆ ಹೋಗಬೇಕು ಎಂದು ಸಿವಿಲ್ ನ್ಯಾಯಾಧೀಶ ಅಶೋಕ್ ಆರ್.ಎಚ್ ಹೇಳಿದರು.
ಕೆಂಚನಗುಡ್ಡ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಜೀವಿಸುವ ಹಕ್ಕಿದೆ. ಯಾವುದೇ ಧರ್ಮ, ಜಾತಿ, ಲಿಂಗ, ಬಣ್ಣ, ಭಾಷೆ, ರಾಜಕೀಯ ಅಥವಾ ಇತರ ಅಭಿಪ್ರಾಯಗಳು, ಸ್ಥಾನಮಾನಗಳ ಪರಿಗಣನೆ ಇಲ್ಲದೆ ಎಲ್ಲರೂ ಸಮಾನರು ಎಂದು ತಿಳಿಸಿದರು.
ಪ್ಯಾನಲ್ ವಕೀಲ ಎನ್.ಅಬ್ದುಲ್ ಸಾಹೇಬ್ ರಾರಾವಿ, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಸಿ.ಎರಿಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ವಕೀಲರ ಸಂಘದ ಉಪಾಧ್ಯಕ್ಷ ಶರೀಫ್ ಸಾಬ್ ಎಂ., ಕಾರ್ಯದರ್ಶಿ ಶಿವಕುಮಾರ್ ಎಂ., ವಕೀಲೆ ಮಂಜುಳಾ, ವಿದ್ಯಾರ್ಥಿಗಳು ಇದ್ದರು.