ಹೊಸಪೇಟೆ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ನಾಯಕ ಪದವೀಧರ ವಿದ್ಯಾವರ್ಧಕ ಸಂಘದ ಮೊದಲ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಣಾ ಕಾರ್ಯಕ್ರಮ ಬೆಂಗಳೂರಿನ ಪೊಲೀಸ್ ತರಬೇತಿ ವಿಭಾಗ ಎಡಿಜಿಪಿ ಬಿ.ದಯಾನಂದ್ ಭಾನುವಾರ ಉದ್ಘಾಟಿಸಿದರು. ಡಿವೈಎಸ್ಪಿ ಡಾ.ಟಿ.ಮಂಜುನಾಥ, ಚನ್ನಗಿರಿ ಶಾಂತಿಸಾಗರ ವಲಯ ಅರಣ್ಯ ಅಧಿಕಾರಿ ಉಷಾ ಇತರರಿದ್ದರು.
- ಬೆಂಗಳೂರಿನ ಪೊಲೀಸ್ ತರಬೇತಿ ವಿಭಾಗ ಎಡಿಜಿಪಿ ಬಿ.ದಯಾನಂದ್ ಸಲಹೆ
ಹೊಸಪೇಟೆ: ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಹಾಗೂ ಅವರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿ ಸ್ಫೂರ್ತಿ ನೀಡಲು ವಾಲ್ಮೀಕಿ ನಾಯಕ ಪದವೀಧರ ವಿದ್ಯಾವರ್ಧಕ ಸಂಘ ಕೈಗೊಳ್ಳುತ್ತಿರುವ ಕಾರ್ಯಕ್ರಮ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಬೆಂಗಳೂರಿನ ಪೊಲೀಸ್ ತರಬೇತಿ ವಿಭಾಗ ಎಡಿಜಿಪಿ ಬಿ.ದಯಾನಂದ್ ಹೇಳಿದರು.
ನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಶ್ರೀ ವಾಲ್ಮೀಕಿ ನಾಯಕ ಪದವೀಧರ ವಿದ್ಯಾವರ್ಧಕ ಸಂಘದ ಮೊದಲ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಣಾ ಕಾರ್ಯಕ್ರಮ ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಹಿರಿಯರು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿರಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಠಿಣ ಅದ್ಯಾಯನ ಮುಖ್ಯ. ಯುವಕರು ಉನ್ನತ ಹುದ್ದೆ ಅಲಂಕರಿಸಿ ಸಮಾಜದ ಏಳಿಗೆಗೆ ಶ್ರಮಿಸಬೇಕು. ವಾಲ್ಮೀಕಿ ನಾಯಕ ಪದವೀಧರ ವಿದ್ಯಾವರ್ಧಕ ಸಂಘದ ಸಮುದಾಯದ ಯುವಜನರ ಅನುಕೂಲ ಆಗುವ ರೀತಿಯಲ್ಲಿ ಹಲವು ಕಾರ್ಯಕ್ರಮಗಳು ನಡೆಸುತ್ತಿದೆ. ಇಂತಹ ಕಾರ್ಯಕ್ರಮ ನಿರಂತರವಾಗಿದ್ದರೆ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಕೈ ಜೋಡಿಸುವಂತಾಗಿರುತ್ತದೆ. ಕಲಿಕೆಯಲ್ಲಿ ಯುವಕರಿಗೆ ಸಂಘಟನೆ ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ ಎಂದರು.
ಚನ್ನಗಿರಿ ಶಾಂತಿಸಾಗರ ವಲಯ ಅರಣ್ಯ ಅಧಿಕಾರಿ ಉಷಾ ಮಾತನಾಡಿ, ವಾಲ್ಮೀಕಿ ಸಮುದಾಯ ಮಹಾನ್ ಪರಂಪರೆ ಹೊಂದಿದೆ. ಧೈರ್ಯ, ಶೌರ್ಯ, ಧಾರ್ಮಿಕ, ಶಿಕ್ಷಣ, ಕೃಷಿ ಮಾತ್ರವಲ್ಲ ಅರಣ್ಯ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಸಮುದಾಯ ಮಕ್ಕಳು ವಿದ್ಯಾಭ್ಯಾಸದಿಂದಲೇ ಗುರಿಯನ್ನು ಮುಟ್ಟಬೇಕಿದೆ. ಯಶಸ್ಸು ಸಾಧಿಸಬೇಕು ಎಂದರೆ ತಾಳ್ಮೆ ಮುಖ್ಯ. ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರದ ಸಾಧನೆಯ ಗುರಿ ಮುಟ್ಟುವುದು ಸಾದ್ಯ ಎಂದರು.
ಸಂಘದ ಅಧ್ಯಕ್ಷ ಡಾ.ಗುಂಡಿ ಮಾರುತಿ ಅಧ್ಯಕ್ಷತೆ ವಹಿಸಿದರು. ಡಿವೈಎಸ್ಪಿ ಡಾ.ಟಿ.ಮಂಜುನಾಥ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ರವಿಕುಮಾರ್, ನಗರಸಭೆ ಪೌರಾಯುಕ್ತ ಶಿವಕುಮಾರ್ ಯರಗುಡಿ, ವಾಲ್ಮೀಕಿ ಸಮುದಾಯದ ತಾಲೂಕು ಅಧ್ಯಕ್ಷ ಗೋಸಲ ಭರಮಪ್ಪ, ಕಲಾವಿದೆ ಡಾ.ಕೆ.ನಾಗರತ್ನಮ್ಮ, ಚಿತ್ರಕಲಾವಿದ ಬಾಣದ ಮಾರುತಿ ಇತರರಿದ್ದರು.