ವಿಜಯಪುರ: ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮೇ 3ರಿಂದ ಆರಂಭವಾಗಬೇಕಿದ್ದ ಎಲ್ಲ ಸ್ನಾತಕ, ಸ್ನಾತಕೋತ್ತರ 1 ಮತ್ತು 3ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ವಿದ್ಯಾರ್ಥಿನಿಯರು ಮಹಿಳಾ ವಿವಿಯ ವೆಬ್‌ಸೈಟ್ ಮೂಲಕ ಪಡೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ.