ಜಿಲ್ಲೆ

ಮಕ್ಕಳಿಗೆ ಶಿಕ್ಷಣದೊಂದಿಗೆ ನೈತಿಕ ಪಾಠ ಕಲಿಸಿ

ವಿಜಯಪುರ: ಮಕ್ಕಳಿಗೆ ಅಂಕ ಗಳಿಸುವುದನ್ನಷ್ಟೇ ಕಲಿಸದೇ ನೈತಿಕ ಹಾಗೂ ಆಧ್ಯಾತ್ಮಿಕ ಪಾಠ ಕಲಿಸುವುದು ಅವಶ್ಯಕ ಎಂದು ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹೇಳಿದರು.
ಸಿದ್ಧೇಶ್ವರ ಶಿಕ್ಷಣ ಸಂಸ್ಥೆಯ ಅಲ್ಲಮಪ್ರಭು ಕನ್ನಡ ಹಾಗೂ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನದ ಸಾನ್ನಿಧ್ಯ ವಹಿಸಿ ಅವರು ಮಾತನಡಿದರು.
ನಾಗಠಾಣ ಶಾಸಕ ಡಾ.ದೇವಾನಂದ ಚವಾಣ್ ಮಾತನಾಡಿ, ಮಕ್ಕಳನ್ನು ಸುಶಿಕ್ಷಿತರರನ್ನಾಗಿ ಮಾಡುವುದು ಅವಶ್ಯಕ ಎಂದು ಹೇಳಿದರು.
ಸಂಸ್ಥೆ ಸಲಹೆಗಾರ ಎಂ.ಒ. ಶಿರೂರ ಹಾಗೂ ಸಂಸ್ಥೆ ಅಧ್ಯಕ್ಷ ವಿವೇಕ ಹುಂಡೇಕಾರ ಮಾತನಾಡಿದರು. ಮುಖ್ಯಶಿಕ್ಷಕ ಎಸ್.ಎ. ಅನಂತಪುರ ಶಾಲೆಯ ವಾರ್ಷಿಕ ವರದಿ ಓದಿದರು. ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು. ಅಂತ್ಯದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಆರ್.ಪಿ. ಕಟ್ಟಿಮನಿ ನಿರೂಪಿಸಿದರು. ಪಿ.ಆರ್.ಪೀರನಾಯಕ ವಂದಿಸಿದರು.