ಜಿಲ್ಲೆ

ಕರೊನಾ ಸೋಂಕಿತರ ಸಂಖ್ಯೆ ಇಳಿಮುಖ

ವಿಜಯಪುರ: ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಬುಧವಾರ 5 ಜನರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಒಟ್ಟು 13,986 ಸೋಂಕಿತರಿದ್ದಾರೆ. 7 ಜನರು ಆಸ್ಪತ್ರೆಯಿಂದ ಗುಣಮುಖರಾಗಿದ್ದು, ಈವರೆಗೆ 13,691 ಜನರು ಗುಣಮುಖರಾಗಿದ್ದಾರೆ.

ಒಟ್ಟು 2,10,175 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,94,089 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 2100 ಜನರ ವರದಿ ಬರಬೇಕಿದೆ. ಒಟ್ಟು 2,10,803 ಜನರ ಮೇಲೆ ನಿಗಾವಹಿಸಲಾಗಿದ್ದು, 92 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 1,96,818 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. ಬುಧವಾರ ಮೃತಪಟ್ಟವರ ಬಗ್ಗೆ ವರದಿ ಆಗಿಲ್ಲ. ಈ ವರೆಗೆ ಒಟ್ಟು 202 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.