ಜಿಲ್ಲೆ

122ಕ್ಕೇರಿದ ಸಾವಿನ ಸಂಖ್ಯೆ

ವಿಜಯಪುರ: ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರು ಸೇರಿ ಮೂವರು ಕರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 122 ಕ್ಕೇರಿದೆ. 55 ವರ್ಷದ ಕಾಂಗ್ರೆಸ್ ಮುಖಂಡ, 68 ವರ್ಷದ ವೃದ್ಧ ಹಾಗೂ 50 ವರ್ಷದ ಮಹಿಳೆ ಮೃತಪಟ್ಟಿದ್ದು, ಮೃತರ ಅಂತ್ಯ ಸಂಸ್ಕಾರವನ್ನು ಸರ್ಕಾರದ ನಿರ್ದೇಶದನ್ವಯ ನೆರವೇರಿಸಲಾಗಿದೆ.

ಜಿಲ್ಲೆಯಲ್ಲಿ ಭಾನುವಾರ ಮತ್ತೆ 97 ಜನರಿಗೆ ಕರೊನಾ ಸೋಂಕು ದೃಢವಾಗಿದೆ. 127 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 7278 ಜನರಿಗೆ ಕರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈವರೆಗೆ 6514 ಜನರು ಗುಣಮುಖರಾಗಿದ್ದಾರೆ.

79,828 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 72,361 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 189 ಜನರ ವರದಿ ಬರಬೇಕಿದೆ. 643 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 59,270 ಜನರ ಮೇಲೆ ನಿಗಾ ವಹಿಸಲಾಗಿದೆ. 46,302 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 6,333 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ತಾಲೂಕುವಾರು ಮಾಹಿತಿ
ವಿಜಯಪುರ ತಾಲೂಕು ವ್ಯಾಪ್ತಿ 3673, ಬಸವನಬಾಗೇವಾಡಿ 754, ಬಬಲೇಶ್ವರ 65, ಚಡಚಣ 42, ದೇವರಹಿಪ್ಪರಗಿ 62, ಇಂಡಿ 666, ಕೊಲ್ಹಾರ 74, ಮುದ್ದೇಬಿಹಾಳ 733, ನಿಡಗುಂದಿ 46, ಸಿಂದಗಿ 629, ತಾಳಿಕೋಟೆ 238, ತಿಕೋಟಾ 81 ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ 215 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.