ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಮತ್ತೆ ಇಬ್ಬರು ಮೃತಪಟ್ಟಿದ್ದು, 133 ಜನರಿಗೆ ಕರೊನಾ ಸೋಂಕು ದೃಢವಾಗಿದೆ. 173 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರು ಏಳು ಸಾವಿರ ಗಡಿಯಲ್ಲಿದ್ದು, ಈವರೆಗೆ 6,995 ಜನರಿಗೆ ಕರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಕರೊನಾದಿಂದ ಮೃತಪಟ್ಟವರನ್ನು ಸರ್ಕಾರದ ನಿರ್ದೇಶನದನ್ವಯ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಈವರೆಗೆ 115 ಜನರು ಕರೊನಾದಿಂದ ಸಾವನ್ನಪ್ಪಿದ್ದಾರೆ.
ಒಟ್ಟು 76,777 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 69,448 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 334 ಜನರ ವರದಿ ಬರಬೇಕಿದೆ. 691 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 56,219 ಜನರ ಮೇಲೆ ನಿಗಾ ವಹಿಸಲಾಗಿದೆ. 43,003 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 6,912 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ವಿಜಯಪುರ ತಾಲೂಕು ವ್ಯಾಪ್ತಿ 3587, ಬಸವನಬಾಗೇವಾಡಿ 728, ಬಬಲೇಶ್ವರ 65, ಚಡಚಣ 41, ದೇವರಹಿಪ್ಪರಗಿ 59, ಇಂಡಿ 632, ಕೊಲ್ಹಾರ 70, ಮುದ್ದೇಬಿಹಾಳ 692, ನಿಡಗುಂದಿ 41, ಸಿಂದಗಿ 608, ತಾಳಿಕೋಟೆ 219, ತಿಕೋಟಾ 79 ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ 174 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.