ಜಿಲ್ಲೆ

ಕರೊನಾ ಸೋಂಕು, 89ಕ್ಕೇರಿದ ಸಾವಿನ ಸಂಖ್ಯೆ

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಮತ್ತೆ ನಾಲ್ವರು ಮೃತಪಟ್ಟಿದ್ದು, 131 ಜನರಿಗೆ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಮೃತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಸರ್ಕಾರದ ಮಾರ್ಗದರ್ಶನದಂತೆ ಶಿಷ್ಟಾಚಾರವಾಗಿ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.

108 ಜನರು ಗುಣಮುಖ
ಜಿಲ್ಲೆಯಲ್ಲಿ ಬುಧವಾರವೂ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಮತ್ತೆ 131 ಜನರಿಗೆ ಕರೊನಾ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಒಟ್ಟು 6,072 ಜನರಿಗೆ ಸೋಂಕು ದೃಢವಾಗಿದೆ. 108 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 5,104 ಜನರು ಬಿಡುಗಡೆಗೊಂಡಿದ್ದಾರೆ.

ಒಟ್ಟು 68,719 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 61,332 ಜನರ ವರದಿ ನಗೆಟಿವ್ ಬಂದಿದೆ. ಇನ್ನೂ 1325 ಜನರ ವರದಿ ಬರಬೇಕಿದೆ. 879 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 53,739 ಜನರ ಮೇಲೆ ನಿಗಾ ವಹಿಸಲಾಗಿದೆ. 40,976 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 7,570 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ.

ತಾಲೂಕುವಾರು ಮಾಹಿತಿ
ವಿಜಯಪುರ ತಾಲೂಕು ವ್ಯಾಪ್ತಿ 3257, ಬಸವನ ಬಾಗೇವಾಡಿ 562, ಬಬಲೇಶ್ವರ 65, ಚಡಚಣ 35, ದೇವರಹಿಪ್ಪರಗಿ 59, ಇಂಡಿ 528, ಕೊಲ್ಹಾರ 57, ಮುದ್ದೇಬಿಹಾಳ 589, ನಿಡಗುಂದಿ 35, ಸಿಂದಗಿ 489, ತಾಳಿಕೋಟೆ 198, ತಿಕೋಟಾ 76 ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ 122 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.