21ರಂದು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ  
ವಿಜಯಪುರ

21ರಂದು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ

ವಿಜಯಪುರ : ಮುಂಬರುವ ಅಧಿವೇಶನದಲ್ಲಿ ವಿಜಯಪುರ ಜಿಲ್ಲೆಯ ಸಮಗ್ರ ನೀರಾವರಿಗಾಗಿ ಹಣ ಮೀಸಲಿಡುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತದ ವತಿಯಿಂದ ಜ. 21 ರಂದು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಯಲಿದೆ.
ಅಂದು ಬೆಳಗ್ಗೆ 12ಕ್ಕೆ ಇಲ್ಲಿನ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭನಟಾ ಮೆರವಣಿಗೆ ಆರಂಭಗೊAಡು ಜಿಲ್ಲಾಽಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು.
ಆಲಮಟ್ಟಿ ಆಣೆಕಟ್ಟಿನ ಎತ್ತರ 524.256 ಮೀ. ಗೆ ಎತ್ತರಿಸಲು ಹಾಗೂ ಮುಳಗಡೆಯಾಗುವ ಸಂತ್ರಸ್ತರಿಗೆ ಪರಿಹಾರ ಕೊಡಲು ಸರಕಾರ ಮುಂಗಡ ಪತ್ರದಲ್ಲಿ ಹಣ ಮೀಸಲಿಡಲು ಕ್ರಮ ಕೈಕೊಳ್ಳಬೇಕು. ಶ್ರೀ ರೇವಣಸಿದ್ಧೇಶ್ವರ ಏತ ನೀರಾವರಿ ಹಂತ-2 (ಬಬಲೇಶ್ವರ, ಚಡಚಣ, ವಿಜಯಪುರ ತಾಲೂಕಿನ ನೀರಾವರಿ ವಂಚಿತ ಎಲ್ಲ ಹಳ್ಳಿಗಳಿಗೆ) ಡಿಪಿಆರ್ ಹಾಗೂ ಎಸ್ಟಿಮೇಟ್ ಟೆಂಡರ್ ಕರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸಲು ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಉತ್ತರ ಪ್ರಾಂತ ಉಪಾಧ್ಯಕ್ಷ ಮಲ್ಲರಗೌಡ ಪಾಟೀಲ ಮತ್ತು ರಾಜ್ಯ ಕಾರ್ಯಕಾರಣಿ ಸದಸ್ಯ ಗುರುನಾಥ ಬಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.