ವಿಜಯಪುರ ನಗರದಲ್ಲಿ ಹೋರಾಟಗಾರ ಶ್ರೀನಾಥ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದರು.
ವಿಜಯಪುರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಸಂಸದ ರಮೇಶ ಜಿಗಜಿಣಗಿ ನೀಡಿರುವ ಹೇಳಿಕೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಗುರುವಾರ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ಇತ್ತೀಚೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ನೋಂದಣಿ ಕುರಿತು ಪ್ರಶ್ನೆಯೊಂದನ್ನು ಎತ್ತಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಂಸದ ರಮೇಶ ಜಿಗಜಿಣಗಿ ಅವರು, ಪ್ರಿಯಾಂಕ್ ಖರ್ಗೆ ಒಬ್ಬ ದಲಿತ ಮನುಷ್ಯ, ಅವನಿಗೇಕೆ ಬೇಕು ಆರ್‌ಎಸ್‌ಎಸ್ ವಿಚಾರ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಸಂಸದರ ಈ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದಲಿತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.
ಸಂಸದರ ಹೇಳಿಕೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ನ್ಯಾಯವಾದಿ ಶ್ರೀನಾಥ ಪೂಜಾರಿ ಅವರ ನೇತೃತ್ವದಲ್ಲಿ ಕಾರ್ಯಕರ್ತರು ವಿಜಯಪುರ ನಗರದ ಅಂಬೇಡ್ಕರ್ ವೃತ್ತದ ಸಮೀಪದ ಹಳೆ ಪ್ರವಾಸಿ ಮಂದಿರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ಮಾರ್ಗ ಮಧ್ಯದ¯್ಲೆÃ ತಡೆದು ವಾಪಸ್ ಕಳುಹಿಸಿದರೂ, ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂಸದರ ಕಚೇರಿಯತ್ತ ತೆರಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದಂತೆ ಗಾಂಽ ಚೌಕ ಪೊಲೀಸ್ ಠಾಣೆಯ ಅಽಕಾರಿಗಳು ಮತ್ತು ಸಿಬ್ಬಂದಿ ಹಳೆ ಪ್ರವಾಸಿ ಮಂದಿರದ ಮುಖ್ಯ ದ್ವಾರದ¯್ಲÉÃ ಅವರನ್ನು ತಡೆದರು. ಹೋರಾಟಗಾರರನ್ನು ವಶಕ್ಕೆ ಪಡೆದು ಕೆಲ ಕಾಲ ಬಳಿಕ ಬಿಡುಗಡೆಗೊಳಿಸಿದರು.
ಎಂಎAಡಿಸಿ ಮುಖಂಡ ಹಾಫಿಜ್ ಸಿದ್ದಖಿ, ಶಬ್ಬೀರ್ ಕಾಗಜಕೊಟಿ, ರಮೇಶ ರಾಠೋಡ, ರಾಕೇಶ ಚವಾಣ್, ಯಮನೂರಿ ಸಿಂಧಗೇರಿ ಇತರರಿದ್ದರು.