ವಿಜಯಪುರದ ಕಿತ್ತೂರು ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಎಂ.ಬಿ. ಪಾಟೀಲ ಮಾತನಾಡಿದರು. ಡಾ. ಆನಂದ ಕೆ. ರಿಷಿ ಆನಂದ, ಎಂ.ಎಸ್. ಕರಡಿ ಮತ್ತಿತರರಿದ್ದಾರೆ.
ವಿಜಯಪುರ: ವೀರರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ, ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ನಾಮಕರಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮಕ್ಕೆ ಜ. 9 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಗರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ಕೇಂದ್ರ ಬಸ್ ನಿಲ್ದಾಣದ ಬಳಿ ವೀರರಾಣಿ ಕಿತ್ತೂರು ಚನ್ನಮ್ಮಳ ಪ್ರತಿಮೆ ಪ್ರತಿಷ್ಠಾಪನೆ ಬಹುದಿನಗಳ ಬೇಡಿಕೆಯಾಗಿತ್ತು. ವೀರರಾಣಿ ಚನ್ನಮ್ಮ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಈ ದೇಶದ ಆಸ್ತಿ, ಅವರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಅಂದಾಜು 40*60 ಜÁಗದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಚನ್ನಮ್ಮಳ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ. ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಚನ್ನಮ್ಮಳ ಹೆಸರನ್ನೇ ಇಡಲಾಗುತ್ತಿದ್ದು, ಹಲವು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೇಡಿಕೆಗೆ ಪರಿಹಾರ ಲಭಿಸಿದೆ. ಅಂದೇ ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಪಂ ಆವರಣದಲ್ಲಿ ನೂತನ ಜಿಲ್ಲಾಡಿಳತ ಭವನದ ಕಟ್ಟಡ ಕಾಮಗಾರಿಗಳಿಗೆ ಹಾಗೂ ಪಾಲಿಕೆಯ 150 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಅಂದಿನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ ಸೇರಿ ವಿವಿಧ ಸಚಿವ ಸಂಪುಟದ ಸಹೋದ್ಯೋಗಿಗಳು ಆಗಮಿಸಲಿದ್ದು, ಜಿಲ್ಲಾಡಿಳತ ಎಲ್ಲ ಶಾಸಕರು, ವಿ.ಪ. ಸದಸ್ಯರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.
ನಗರದ ಆಶ್ರಮ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಸಮಾರಂಭದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಇತರೇ ಶಾಸಕರ ಮತಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೂ ಇಲ್ಲಿಂದಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾಡಿನ ಹೆಮ್ಮೆಯ ಸ್ವಾತಂತ್ರ‍್ಯ ಹೋರಾಟಗಾರರಿಗೆ ಆ ಮೂಲಕ ಗೌರವ ಸಲ್ಲಿಸುವ ಕಾರ್ಯವನ್ನು ನಮ್ಮ ಸರ್ಕಾರದಿಂದ ಮಾಡಲಾಗುತ್ತಿದೆ ಎಂದರು.
ಈ ಹಿಂದೆ 2013-18ರ ಅವಽಯಲ್ಲಿ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭ ಹಿರಿಯರ ಆಶಯದಂತೆ 40*60 ಜಾಗೆಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಅಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೂಡಲಸಂಗಮ ಸ್ವಾಮೀಜಿ ಜಯಮೃತ್ಯುಂಜಯ ಹಾಗೂ ಜಿಲ್ಲೆಯ ಜನಪ್ರತಿನಿಽಗಳೊಂದಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಈ ಮೂರ್ತಿ ಉದ್ಘಾಟನೆ ಭಾಗ್ಯವೂ ನಮ್ಮ ಸರ್ಕಾರಕ್ಕೆ ದೊರೆತಿರುವುದಕ್ಕೆ ಹರ್ಷವಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿ.ಪಂ. ಸಿಇಒ ರಿಷಿ ಆನಂದ, ಪಾಲಿಕೆ ಮೇಯರ್ ಎಂ.ಎಸ್. ಕರಡಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಽಕಾರಿ ನಾರಾಯಣಪ್ಪ ಕುರಬರ, ವಿದ್ಯಾರಾಣಿ ತುಂಗಳ ಮತ್ತಿತರರಿದ್ದರು.