ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ತಲಾ 3 ರೂ. ಏರಿಸಿರುವ ಕ್ರಮ ಖಂಡನಾರ್ಹ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.
ವಿಜಯಪುರ : ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ತಲಾ 3 ರೂ. ಏರಿಸಿರುವ ಕ್ರಮ ಖಂಡನಾರ್ಹ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.
ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ.
ಅಮೆರಿಕಾ-ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ.
ಆದರೆ, ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಅಲ್ಲದೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಽಸುವ ತೆರಿಗೆಗಳೇ ಇವೆ. ಹೀಗಾಗಿ, ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ತೈಲ ಕಂಪನಿಗಳ ಲಾಭಕ್ಕಾಗಿ ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್‌ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು.
ಈ ಯುದ್ಧವನ್ನು ನಿಲ್ಲಿಸುವಂತೆ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ಎಸ್‌ಯುಸಿಐ (ಸಿ) ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.