30ರಂದು ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್ 
ವಿಜಯಪುರ

30ರಂದು ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್

ವಿಜಯಪುರ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ಮೇ 30ರಂದು ಬೆಳಗ್ಗೆ 8 ಗಂಟೆಗೆ ಇಲ್ಲಿನ ಅ-Àಜಲಪುರ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ನಡೆಯಲಿದೆ.
ಅಲ್ಪ ಸಂಖ್ಯಾತರ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ 2026-27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಆಯ್ಕೆಯಾದ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳು ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬಹುದಾಗಿದೆ.
ವಿದ್ಯಾರ್ಥಿಗಳು ತಪ್ಪದೇ ಕೌನ್ಸೆಲಿಂಗ್‌ಗೆ ಹಾಜರಾಗಲು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಽಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಽಕಾರಿಗಳ ಕಚೇರಿ, ಮೌಲಾನಾ ಆಜಾದ ಭವನ, ಜಿ.ಪಂ. ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ವಿಳಾಸಕ್ಕೆ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.