ವಿಜಯಪುರದ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸೃಜನೋತ್ಸವ-2026 ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ. ವಾರಣಾಸಿ ಸುಭೋಷ, ಡಾ. ಚಂದ್ರಶೇಖರ ಕುಪ್ಪಿ, ಶಂಭುಲಿAಗಯ್ಯ ಕರ್ಪೂರಮಠ ಮತ್ತಿತರರಿದ್ದಾರೆ.
ವಿಜಯಪುರ: ನಗರದ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಇತ್ತೀಚೆಗೆ ವಾರ್ಷಿಕೋತ್ಸವ ಅಂಗವಾಗಿ ಸೃಜನೋತ್ಸವ-2026 ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿAದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೇರಳದ ಕೇಂದ್ರ ಆಯುರ್ವೇದ ಸಂಶೋಧನಾ ವಿe್ಞÁನ ಮಂಡಳಿಯ ಸಹಾಯಕ ನಿರ್ದೇಶಕ ಡಾ. ವಾರಣಾಸಿ ಸುಭೋಷ ಮಾತನಾಡಿ, ಆಯುರ್ವೇದ ಕ್ಷೇತ್ರದಲ್ಲಿ ನಡೆಯುತ್ತಿರುವ ಇತ್ತೀಚಿನ ತಾಂತ್ರಿಕ ಅಭಿವೃದ್ಧಿ ಹಾಗೂ ದೇಶಾದ್ಯಂತ ನಡೆಯುತ್ತಿರುವ ಸಂಶೋಧನಾ ಕಾರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಲ್ಲದೆ, ವಿಶ್ವಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ಆರ್‌ಕೆಎಂ ಸಂಸ್ಥೆಯ ಕಾರ್ಯಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಗೌರವ ಉಪಸ್ಥಿತಿ ವಹಿಸಿದ್ದ ಬೆಂಗಳೂರು ರಾಜೀವ್ ಗಾಂಽ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಸಂತೋಷ ಇಂಡಿ ಹಾಗೂ ಯಾದಗಿರಿಯ ಶಾರದಾ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಚಂದ್ರಶೇಖರ ಕುಪ್ಪಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಮನೋಭಾವ ಹಾಗೂ ನೈತಿಕ ವೈದ್ಯಕೀಯ ಸೇವೆಗಳತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ಆರ್‌ಕೆಎಂ ಸಮೂಹ ಸಂಸ್ಥೆಗಳ ಮಹಾಸಚಿವ ಶಂಭುಲಿAಗಯ್ಯ ಕರ್ಪೂರಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ನವೋತ್ಸಾಹ ಮತ್ತು ಸೇವಾಭಾವನೆ ವೃತ್ತಿಪರ ಯಶಸ್ಸಿನ ಮೂಲಸ್ತಂಭಗಳಾಗಿವೆ ಎಂದು ತಿಳಿಸಿದರು.
ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮೇಧಾ ಹಿರೇಮಠ, ಅಮಿತ ಎಚ್., ಡಾ. ಸೌಭಾಗ್ಯ ಸರಶೆಟ್ಟಿ ವೇದಿಕೆಯಲ್ಲಿದ್ದರು. ಡಾ. ಸಂಜೀವ ಜೋಶಿ ಹಾಗೂ ಡಾ. ತೇಜಸ್ವಿನಿ ಜನಗೊಂಡ ಕಾರ್ಯಕ್ರಮ ನಿರ್ವಹಿಸಿದರು.