ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬAಽಸಿದAತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡ ವಿಶೇಷ ಅಽಕಾರಿ ಡಾ. ರಾಜಶೇಖರ ದ್ಯಾಬೇರಿ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಜಯಪುರ ನಗರದಲ್ಲಿ ಭೇಟಿ ಸನ್ಮಾನಿಸಿದರು. ಶಿವಾನಂದ ಮಾಸ್ತಿಹೋಳಿ, ಸಿದ್ದಲಿಂಗ ಬಾಗೇವಾಡಿ, ಅನಿಲ ಹೊಸಮನಿ ಮತ್ತಿತರರಿದ್ದಾರೆ. 
ವಿಜಯಪುರ

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನಾ ಹೋರಾಟ ಸಮಿತಿ ಸದಸ್ಯರು ಶನಿವಾರ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬAಽಸಿದAತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡ ವಿಶೇಷ ಅಽಕಾರಿ ಡಾ. ರಾಜಶೇಖರ ದ್ಯಾಬೇರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ನಂತರ ವೈದ್ಯಕೀಯ ಶಿಕ್ಷಣದ ಅಗತ್ಯತೆ ಹಾಗೂ ಜಿ¯್ಲೆಯ ಆರೋಗ್ಯ ಕ್ಷೇತ್ರದ ಸವಾಲುಗಳ ಕುರಿತು ಮಾಹಿತಿ ನೀಡಿದರು.
ವಿಜಯಪುರ ಜಿಲ್ಲೆಯು ಉತ್ತರ ಕರ್ನಾಟಕದ ಪ್ರಮುಖ ಜಿ¯್ಲÉಯಾಗಿದ್ದರೂ ಕೂಡ ಈವರೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಿರಲಿಲ್ಲ. ಅದರಿಂದ ಜಿ¯್ಲÉಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನ್ಯಾಯವಾದಂತಾಗಿತ್ತು. ಅಲ್ಲದೇ, ವೈದ್ಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ದೂರದ ಜಿ¯್ಲÉಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಹೋರಾಟ ಸಮಿತಿ ಸದಸ್ಯರು ತಿಳಿಸಿದರು.
ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯಾದಲ್ಲಿ ಜಿ¯್ಲÉಯ ಆರೋಗ್ಯ ಸೇವೆಗಳ ಗುಣಮಟ್ಟ ಹೆಚ್ಚುವುದರ ಜತೆಗೆ ತಜ್ಞ ವೈದ್ಯರ ಲಭ್ಯತೆ, ಆಧುನಿಕ ಚಿಕಿತ್ಸಾ ಸೌಲಭ್ಯಗಳು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಹೋರಾಟ ಸಮಿತಿಯವರು ಪ್ರತಿಪಾದಿಸಿದರು.
ನಂತರ ಹೋರಾಟಗಾರರ ಮನವಿಗೆ ಸ್ಪಂದಿಸಿದ ವಿಶೇಷಾಽಕಾರಿ ಡಾ. ರಾಜಶೇಖರ ದ್ಯಾಬೇರಿ ಪ್ರತಿಕ್ರಿಯೆ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿ, ಅಗತ್ಯ ಮಾಹಿತಿ ಮತ್ತು ಸಂಗ್ರಹಿಸಿದ ವರದಿಯನ್ನು ಶೀಘ್ರದ¯್ಲÉÃ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಶಸöಚಿಕಿತ್ಸಕ ಶಿವಾನಂದ ಮಾಸ್ತಿಹೋಳಿ, ಹೋರಾಟ ಸಮಿತಿಯ ಸದಸ್ಯರಾದ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಬಿ. ಭಗವಾನ ರೆಡ್ಡಿ, ಅಕ್ರಮ ಮಾಶಾಳ್ಕರ, ಸುರೇಶ ಜೀಬಿ, ಸಂಗನಬಸವ ಸ್ವಾಮೀಜಿ, ಲಲಿತಾ ಬಿಜ್ಜರಗಿ, ಎಲ್.ಎಚ್. ಲೆಂಡಿ, ಸಿದ್ದಲಿಂಗ ಬಾಗೇವಾಡಿ, ಗುರಿಕರ, ಗಿರೀಶ ಕಲಘಟಗಿ, ಲಕ್ಷ÷್ಮಣ ಕಂಬಾಗಿ, ಸಿದ್ರಾಮ ಹಿರೇಮಠ, ಮಲ್ಲು ಕಾಮನಕೇರಿ, ಶಿವರಂಜಿನಿ ಮತ್ತಿತರರಿದ್ದರು.