ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ 
ವಿಜಯಪುರ

ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ

ಪ್ರಮುಖ ಮುಖ್ಯಾಂಶಗಳು

  • ಆ. 23ರಿಂದ 25ರವರೆಗೆ ಜಿಲ್ಲಾ ಪ್ರವಾಸ
  • ಮಹಿಳೆಯರೊಂದಿಗೆ ಸಂವಾದ
ವಿಜಯಪುರ :

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಆ. 23ರಿಂದ 25ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಆ. 23ರಂದು ಬೆಳಗ್ಗೆ ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಾತ್ರೆಯಲ್ಲಿ ಉಪಸ್ಥಿತಿ ವಹಿಸುವರು. ಸಂಜೆ 4.30 ಕ್ಕೆ ಸಂಕಷ್ಟದಲ್ಲಿರುವ ಮದಭಾವಿ ತಾಂಡಾ ಮಹಿಳೆಯರೊಂದಿಗೆ ಸಂವಾದ ನಡೆಸುವರು.
ಆ. 24ರಂದು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸುರಕ್ಷತೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬಳಿಕ ಜಿ.ಪಂ. ಸಭಾಂಗಣದಲ್ಲಿ ಪೋಶ್ ಕಾಯ್ದೆ-2013ರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಬಳಿಕ ದರ್ಗಾ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಲ್ಲಿಂದ ಇಂಡಿ ರಸ್ತೆಯಲ್ಲಿರುವ ಆಲಿಯಾಬಾದ್ ಪಾಂಗ್ರುನ್ ದೊಡ್ಡಿಯ ಕುರಿಗಾಹಿ ಮಹಿಳೆಯರನ್ನು ಭೇಟಿಮಾಡಿ ಸಮಸ್ಯೆ ಆಲಿಸುವರು.
25ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಸ್ಪತ್ರೆ ಆವರಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ, ನಂತರ ಜಿ.ಪಂ. ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಹಿಳಾ ದೌರ್ಜನ್ಯ ಪ್ರಕರಣಗಳು, ರಕ್ಷಣೆ ಹಾಗೂ ಕಾನೂನು ಕ್ರಮಗಳ ಕುರಿತು ಚರ್ಚೆಯಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.