ವಿಜಯಪುರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಡಾ. ಔದ್ರಾಮ, ಡಾ. ರೇವಣಸಿದ್ದಪ್ಪ ಪದರಾ ಮತ್ತಿತರರಿದ್ದಾರೆ. 
ವಿಜಯಪುರ

ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ

ವಿಜಯಪುರ: ಏ. 23ರಿಂದ ಮೇ. 22ರವರೆಗೆ ಜಿಲ್ಲೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಽಕಾರಿ ಡಾ. ಔದ್ರಾಮ ಹೇಳಿದರು.
ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ರಾಷ್ಟಿçÃಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ 9ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆ ವತಿಯಿಂದ ಹಮ್ಮಿಕೊಂಡ ಅಭಿಯಾನದಲ್ಲಿ ರೈತರು, ಹಾಲು ಉತ್ಪಾದಕರ ಸಂಘಗಳು ಭಾಗವಹಿಸುವ ಮೂಲಕ ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸುವುದರ ಜತೆಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.
ಜಾನುವಾರುಗಳಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ 1962 ಪಶು ಸಹಾಯವಾಣಿಗೆ ಕರೆ ಮಾಡಿ ಉಚಿತ ಅಂಬ್ಯುಲೆನ್ಸ್ ಸೇವೆ ಪಡೆದುಕೊಳ್ಳಬಹುದು. ಕಾಲು ಬಾಯಿ ರೋಗವು ಎತ್ತು, ಹೋರಿ, ಹಸು ಹಾಗೂ ಎಮ್ಮೆ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ.
ಅಲ್ಲದೆ, ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ ಉಂಟಾಗಲಿದೆ. ಜತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯ ಎಂದರು.
ಪಶುಸAಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ರೇವಣಸಿದ್ದಪ್ಪ ಪದರಾ ಮಾತನಾಡಿ, ಜಿಲ್ಲೆಯಲ್ಲಿ 132843 ದನಗಳು, 135773 ಎಮ್ಮೆಗಳು ಸೇರಿ ಒಟ್ಟು 268613 ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ ಕಾಲು ಬಾಯಿ ಜ್ವರಕ್ಕೆ ಲಸಿಕೆ ನೀಡುವ ತಂಡಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಕರ ಪತ್ರ, ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.