ವಿಜಯಪುರ: ಸರ್ಕಾರಿ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಕಂಡು ಬಂದ ಹಿನ್ನೆಲೆ ಲೋಕಾಯುಕ್ತರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿಗಳು ಈಚೆಗೆ ಜಿಲ್ಲಾ ಪ್ರವಾಸದಲ್ಲಿರುವಾಗ ವಸತಿ ನಿಲಯ ಹಾಗೂ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಇರುವುದು ಕಂಡು ಬಂದಿದೆ. ಸ್ವಚ್ಛತೆಯ ಕೊರತೆ, ಆಹಾರ ಒದಗಿಸುವಲ್ಲಿ ನ್ಯೂನತೆಗಳು, ಶುದ್ಧಿ ಕುಡಿಯುವ ನೀರಿನ ಅಭಾವ ಮತ್ತಿತರ ಸಮಸ್ಯೆಗಳು ಕಂಡು ಬಂದಿವೆ. ಪ್ರಾಂಶುಪಾಲರಾದಿಯಾಗಿ ವಾರ್ಡನ್ಗಳು ಮತ್ತು ಸಿಬ್ಬಂದಿ ಕರ್ತವ್ಯ ಲೋಪ ಮತ್ತು ದುರಾಡಳಿತ, ಅಕ್ರಮ ನಡೆಸಿರುವುದು ಕಂಡು ಬಂದಿದೆ.
ತನ್ನಿಮಿತ್ತ ಲೋಕಾಯುಕ್ತರು ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಧಿಕಾರಿಗಳು ಮತ್ತು ಸಂಬಂಧಿಸಿದವರ ಮೇಲೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
*